
ಹಾಸನ: ರಾಜಕೀಯಲ್ಲಿ ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹಮದ್ ಇನ್ನೂ ಚೈಲ್ಡ್ (ಮಗು). ಚುನಾವಣೆಯಲ್ಲಿ ಆತನನ್ನು ಸೋಲಿಸಲು ನಮ್ಮಂಥ ಸಾಮಾನ್ಯ ಕಾರ್ಯಕರ್ತರೇ ಸಾಕು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶರವಣ ಹೇಳಿದ್ದಾರೆ.
ಹಾಸನಾಂಬ ತಾಯಿ ದರ್ಶನದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ವರಿಷ್ಠರು ಆದೇಶಿಸಿದರೆ ಜಮೀರ್ ವಿರುದ್ಧ ನಾನು ಚುನಾವಣೆ ಎದುರಿಸಲು ಸಿದ್ಧನಿದ್ದೇನೆ ಎಂದರು. ಯಾವ ಪಕ್ಷದವರನ್ನು ಎಲ್ಲಿಗೆ ಕಳುಹಿಸಬೇಕು ಎಂಬುದನ್ನು ರಾಜ್ಯದ ಜನ 2018 ರಲ್ಲಿ ತೀರ್ಮಾನ ಮಾಡುತ್ತಾರೆ. ಚುನಾವಣೆ ದೃಷ್ಟಿಯಿಂದ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇನೆ ಎಂದು ಹೇಳಿದರು.
ಸೋಮವಾರ ಕೂಡ ಜಮೀರ್ ವಿರುದ್ಧ ವಾಗ್ದಾಳಿ ನಡೆಸಿದ್ದ ಶರವಣ, ಹಣಕ್ಕಾಗಿ ವೋಟು ಮಾರಿಕೊಂಡ ನೀಜ ಜಮೀರ್ ಅಹಮದ್ ಎಂದು ಗುಡುಗಿದ್ದರು. ಕಾಂಗ್ರೆಸ್‌ನಲ್ಲಿ ಜಮೀರ್ ಕೊಚ್ಚಿಹೋಗಲಿದ್ದಾರೆ ಎಂದಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.