ಗೋರಕ್ಷಕರ ವಿರುದ್ಧ ತುರ್ತಾಗಿ ಕ್ರಮ ಕೈಗೊಳ್ಳಿ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಸೂಚನೆ

By Suvarna Web DeskFirst Published Sep 6, 2017, 1:33 PM IST
Highlights

ಗೋರಕ್ಷಕರ ಅಟ್ಟಹಾಸವನ್ನು ತಡೆಯಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಇಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಸ್ವಯಂಘೋಷಿತ ಗೋರಕ್ಷಕರ ತಡೆಗಾಗಿ ಪ್ರತಿ ಜಿಲ್ಲೆಯಲ್ಲೂ ಹಿರಿಯ ಪೊಲೀಸ್ ಆಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಿಸುವಂತೆ ಸುಪ್ರೀಂ ಕೋರ್ಟ್ ಹೇಳಿದೆ.

ನವದೆಹಲಿ: ಗೋರಕ್ಷಕರ ಅಟ್ಟಹಾಸವನ್ನು ತಡೆಯಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಇಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಸ್ವಯಂಘೋಷಿತ ಗೋರಕ್ಷಕರ ತಡೆಗಾಗಿ ಪ್ರತಿ ಜಿಲ್ಲೆಯಲ್ಲೂ ಹಿರಿಯ ಪೊಲೀಸ್ ಆಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಿಸುವಂತೆ ಸುಪ್ರೀಂ ಕೋರ್ಟ್ ಹೇಳಿದೆ.

ಗೋರಕ್ಷಣೆ ಹೆಸರಿನಲ್ಲಿ ನಡೆಯುವ ಹಿಂಸೆಯನ್ನು ಕೇವಲ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಯೆಂದು ಹೇಳಿ ಸರ್ಕಾರಗಳು ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳುವಂತಿಲ್ಲವೆಂದು ಅರ್ಜಿದಾರರ ಪರ ವಕೀಲರು ವಾದಿಸಿದರು.

ಗೋರಕ್ಷಣೆಯ ನೆಪದಲ್ಲಿ ಜನರು ಕಾನೂನನ್ನು ಕೈಗೆತ್ತಿಕೊಳ್ಳುವ  ಚಾಳಿಯನ್ನು ತಡೆಯಲು ಸರ್ಕಾರಗಳು ಏನು ಕ್ರಮ ಕೈಗೊಂಡಿವೆ ಎಂದು ಪ್ರಶ್ನಿಸಿದ ಸುಪ್ರೀಂ, ಕೂಡಲೇ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದೆ.

ಗೋರಕ್ಷಣೆಯ ಹೆಸರಿನಲ್ಲಿ ಇತ್ತೀಚಿಗಿನ ವರ್ಷಗಳಲ್ಲಿ ಹೆಚ್ಚಾಗಿರುವ ಹಿಂಸಾಚಾರವನ್ನು ಗಂಭೀರವಾಗಿ ಪರಿಗಣಿಸಿದ ಸುಪ್ರೀಂ ಕೋರ್ಟ್, ರಾಜ್ಯ ಪೊಲೀಸ್ ಮಹಾನಿರ್ದೇಶಕರೊಂದಿಗೆ ಸಮಾಲೋಚನೆ ನಡೆಸಿ ಕ್ರಮ ಕೈಗೊಳ್ಳುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ  ಸೂಚಿಸಿದೆ.

click me!