'ತಮಿಳುನಾಡು ಸಿಎಂ ಜಯಾ ಆರೋಗ್ಯದ ಬಗ್ಗೆ ಹರಿದಾಡುತ್ತಿರುವ ವದಂತಿ'- ಸತ್ಯ ಸಂಗತಿ ಏನು..?

By Internet DeskFirst Published Sep 30, 2016, 7:08 AM IST
Highlights

ಬೆಂಗಳೂರು(ಸೆ.30): ತಮಿಳುನಾಡು ಸಿಎಂ ಜಯಲಲಿತಾ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಅಪೋಲೋ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಅಪೋಲೋ ಆಸ್ಪತ್ರೆ ವೈದ್ಯರು ಜಯಾ ಆರೋಗ್ಯದ ಬಗ್ಗೆ ಯಾವುದೇ ಮಾಹಿತಿ ನೀಡದ ಕಾರಣ ಹಲವು ವದಂತಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದವು ಈ ಹಿನ್ನಲೆಯಲ್ಲಿ ಅಪೋಲೋ ಆಸ್ಪತ್ರೆ ವೈದ್ಯರು ಪತ್ರಿಕಾ ಹೇಳಿಕೆ ನೀಡಿದ್ದಾರೆ. 

ನಿನ್ನೆ ಜಯಲಲಿತಾ ಚಿಕಿತ್ಸೆ ಪಡೆಯುತ್ತಿರುವ ಅಪೋಲೋ ಆಸ್ಪತ್ರೆ ಆಡಳಿತ ಮಂಡಳಿ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಕೆಲದಿನಗಳಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದು, ಶೀಘ್ರವೇ ಗುಣಮುಖರಾಗಿ ಮನೆಗೆ ತೆರಳಲಿದ್ದಾರೆ. ವೈದ್ಯರ ಸಲಹೆ ಮೇರೆಗೆ ಕೆಲ ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲಿದ್ದಾರೆ ಎಂದು ಸ್ಥಳೀಯ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

Latest Videos

ಈ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ವದಂತಿಗೆ ಬ್ರೇಕ್ ಬಿದ್ದಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದ ತಮಿಳುನಾಡು ಸಿಎಂ ಜಯಲಲಿತಾ ಕೆಲದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಅಪೋಲೋ ಆಸ್ಪತ್ರೆ ವೈದ್ಯರು ಜಯಾ ಆರೋಗ್ಯದ ಬಗ್ಗೆ ಯಾವುದೇ ಮಾಹಿತಿ ನೀಡದ ಕಾರಣ ಹಲವು ವದಂತಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದವು.

ಜಯಲಲಿತಾ ಆಸ್ಪತ್ರೆಗೆ ದಾಖಲಾದ, ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಯ ಸಿಸಿಟಿವಿ ದೃಶ್ಯಗಳನ್ನು ಡಿಲೀಟ್ ಮಾಡಿಸಿದ್ದರಿಂದ ಹಲವು ಅನುಮಾನಗಳು  ಮಾಡಿದ್ದವೂ. ಇದೀಗ ಅಪೋಲೋ ಆಸ್ಪತ್ರೆಯೇ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ಈ ಎಲ್ಲ ರೂಮರ್ಸ್ಗೆ ಅಂತ್ಯವಾಡಿದೆ.


 

click me!