ದೆಹಲಿಯಲ್ಲಿ ತಮಿಳುನಾಡು ರೈತರ ಧರಣಿ ತಾತ್ಕಲಿಕ ಹಿಂಪಡೆತ

By Suvarna Web DeskFirst Published Apr 23, 2017, 2:26 PM IST
Highlights

ಇನ್ನೊಂದು ತಿಂಗಳಲ್ಲಿ ಬರ ಪರಿಹಾರ ಪ್ಯಾಕೇಜ್ ಘೋಷಿಸುವುದಾಗಿ ಭರವಸೆ ನೀಡಿದ ಹಿನ್ನಲೆಯಲ್ಲಿ ದೆಹಲಿಯ ಜಂತರ್'ಮಂತರ್'ನಲ್ಲಿ ನಡೆಸುತ್ತಿದ್ದ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ.

ನವದೆಹಲಿ(ಏ.23): ಸಾಲ ಮನ್ನಾ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಕಳೆದ 39 ದಿನಗಳಿಂದ ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ತಮಿಳುನಾಡು ರೈತರು ಮುಖ್ಯಮಂತ್ರಿ ಇ.ಪಳಿನಿಸ್ವಾಮಿ ಭರವಸೆ ನೀಡಿದ ಹಿನ್ನಲೆಯಲ್ಲಿ ಧರಣಿಯನ್ನು ತಾತ್ಕಾಲಿಕವಾಗಿ ವಾಪಸ್ ಪಡೆದಿದ್ದಾರೆ.

ಇನ್ನೊಂದು ತಿಂಗಳಲ್ಲಿ ಬರ ಪರಿಹಾರ ಪ್ಯಾಕೇಜ್ ಘೋಷಿಸುವುದಾಗಿ ಭರವಸೆ ನೀಡಿದ ಹಿನ್ನಲೆಯಲ್ಲಿ ದೆಹಲಿಯ ಜಂತರ್'ಮಂತರ್'ನಲ್ಲಿ ನಡೆಸುತ್ತಿದ್ದ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ. ಇಂದು ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದ ತಮಿಳು ನಾಡು ಸಿಎಂ ಪಳಿನಿ ಸ್ವಾಮಿ ಪ್ರಧಾನಿಯವರನ್ನು ಭೇಟಿಯಾಗಿ ರೈತರ ಸಮಸ್ಯೆಯ ಬಗ್ಗೆ ಚರ್ಚಿಸಿದರು. ಜೊತೆಗೆ ಹಣಕಾಸು ಸಚಿವ ಅರುಣ್ ಜೈಟ್ಲಿ, ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿದ್ದರು.

ಮೇ.25ರೊಳಗಾಗಿ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಧರಣಿಯನ್ನು ಪುನಃ ಆರಂಭಿಸುವುದಾಗಿ ರೈತರ ಸಂಘ ಎಚ್ಚರಿಕೆ ನೀಡಿದೆ. 40 ಸಾವಿರ ಕೋಟಿ ರೂ. ಬರ ಪರಿಹಾರ ಪ್ಯಾಕೇಜ್ ಹಾಗೂ ಕೇಂದ್ರವು ಕಾವೇರಿ ನಿರ್ವಹಣಾ ಮಂಡಳಿ ರಚಿಸಬೇಕೆಂದು ಒತ್ತಾಯಿಸಿ ಕಳೆದ 39 ದಿನಗಳಿಂದ ಬೆತ್ತಲೆಯಾಗಿ, ತಲೆ ಬೋಳಿಸಿಕೊಂಡು, ಮೂತ್ರ ಕುಡಿಯುವುದು ಸೇರಿದಂತೆ ವಿವಿಧ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು.ತಮಿಳುನಾಡು ಕಳೆದ 140 ವರ್ಷಗಳಲ್ಲಿ ಹಿಂದೆಂದು ಕಂಡರಿಯದಂತ ಬರ ಆವರಿಸಿದೆ  

click me!