ಜನವರಿ 1 ರಿಂದ ಪ್ಲಾಸ್ಟಿಕ್ ಗೆ ಗುಡ್ ಬೈ..!

First Published Jun 5, 2018, 3:16 PM IST
Highlights

ವಿಶ್ವ ಪರಿಸರ ದಿನದಂದು ತಮಿಳುನಾಡು ಸರ್ಕಾರ ಹೊಸ ಘೋಷಣೆ ಮಾಡಿದೆ.  ಜನವರಿ 1, 2019ರಿಂದ ರಾಜ್ಯದಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ ಮಾಡಿದೆ. ಪರಿಸರ ಸಂರಕ್ಷಣೆ ಮತ್ತು ಮುಂದಿನ ತಲೆಮಾರಿಗೆ ಪ್ಲಾಸ್ಟಿಕ್ ರಹಿತ ಪರಿಸರ ನೀಡುವ ಉದ್ದೇಶದಿಂದ ರಾಜ್ಯದಲ್ಲಿ ಪ್ಲಾಸ್ಟಿಕ್ ನಿಷೇಧ ಮಾಡಲಾಗುತ್ತಿದೆ ಎಂದು ಸಿಎಂ ಪಳನಿಸ್ವಾಮಿ ಘೋಷಣೆ ಮಾಡಿದ್ದಾರೆ.

ಚೆನೈ(ಜೂ.5): ವಿಶ್ವ ಪರಿಸರ ದಿನದಂದು ತಮಿಳುನಾಡು ಸರ್ಕಾರ ಹೊಸ ಘೋಷಣೆ ಮಾಡಿದೆ.  ಜನವರಿ 1, 2019ರಿಂದ ರಾಜ್ಯದಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ ಮಾಡಿದೆ. ಪರಿಸರ ಸಂರಕ್ಷಣೆ ಮತ್ತು ಮುಂದಿನ ತಲೆಮಾರಿಗೆ ಪ್ಲಾಸ್ಟಿಕ್ ರಹಿತ ಪರಿಸರ ನೀಡುವ ಉದ್ದೇಶದಿಂದ ರಾಜ್ಯದಲ್ಲಿ ಪ್ಲಾಸ್ಟಿಕ್ ನಿಷೇಧ ಮಾಡಲಾಗುತ್ತಿದೆ ಎಂದು ಸಿಎಂ ಪಳನಿಸ್ವಾಮಿ ಘೋಷಣೆ ಮಾಡಿದ್ದಾರೆ.
 
ಸಾಂಪ್ರದಾಯಿಕ ನೈಸರ್ಗಿಕ ವಸ್ತುಗಳನ್ನು ಪ್ಲಾಸ್ಟಿಕ್ ಗೆ ಪರ್ಯಾಯವಾಗಿ ಬಳಕೆ ಮಾಡಲು ಉತ್ತೇಜನ ನೀಡುವುದು ಸರ್ಕಾರದ ಉದ್ದೇಶವಾಗಿದೆ ಎಂದು ಸಿಎಂ ತಿಳಿಸಿದ್ದಾರೆ. ಜೈವಿಕ ಅಲ್ಲದ ವಸ್ತುಗಳು, ಪ್ರಮುಖವಾಗಿ ಪ್ಲಾಸ್ಟಿಕ್ ಅಥವಾ ಪಾಲಿಥಿನ್ ಕವರ್ ಗಳಿಂದಾಗಿ ಪರಿಸರಕ್ಕೆ ಹಾನಿಯಾಗುತ್ತಿದ್ದು, ನೀರಿನ ಹರಿವಿನ ಮೇಲೆ ಇದು ಅಡ್ಡ ಪರಿಣಾಮ ಬೀರುತ್ತಿದೆ. ಪ್ಲಾಸ್ಟಿಕ್ ಸುಡುವುದರಿಂದಲೂ ಪರಿಸರ ಮಾಲಿನ್ಯ ಉಂಟಾಗುತ್ತಿದ್ದು, ಗಾಳಿ, ನೀರು, ಭೂಮಿಯನ್ನು ಪ್ಲಾಸ್ಟಿಕ್ ಕಲುಷಿತಗೊಳಿಸುತ್ತಿದೆ. ಹೀಗಾಗಿ ರಾಜ್ಯದಲ್ಲಿ ನೂತನ ವರ್ಷಾರಂಭದಿಂದ ಪ್ಲಾಸ್ಟಿಕ್ ನಿಷೇಧಿಸಲಾಗುತ್ತಿದೆ. 

ಅಗತ್ಯ ವಸ್ತುಗಳಿಗೆ ಮಾತ್ರ ವಿನಾಯಿತಿ:
ಇನ್ನು ಹಾಲು, ಮೊಸರು, ತುಪ್ಪ, ಎಣ್ಣೆಯಂತಹ ಅಗತ್ಯ ವಸ್ತುಗಳಿಗೆ ಪ್ಲಾಸ್ಟಿಕ್ ನಿಷೇಧದಿಂದ ವಿನಾಯಿತಿ ನೀಡುವುದಾಗಿ ಸರ್ಕಾರ ತಿಳಿಸಿದೆ. ಈ ಹಿಂದೆ ತಮಿಳುನಾಡಿನಲ್ಲಿ ಸಂಪೂರ್ಣ ಪ್ಲಾಸ್ಟಿಕ್ ನಿಷೇಧದ ಕುರಿತು ಮಾಜಿ ಸಿಎಂ ದಿವಂಗತ ಜೆ ಜಯಲಲಿತಾ ಅವರು ಪ್ರಸ್ತಾಪ ಮಾಡಿದ್ದರು. ಅಲ್ಲದೆ ರಾಜ್ಯದಲ್ಲಿ ಪ್ಲಾಸ್ಟಿಕ್ ನಿಷೇಧ ಮಾಡುವ ಸಂಬಂಧ ಸಮಿತಿಯನ್ನು ಕೂಡ ರಚನೆ ಮಾಡಿದ್ದರು.

click me!