ಅಮ್ಮಾ ಸಾವಿನ ತನಿಖೆ ನಡೆಸುವುದಾಗಿ ತಮಿಳುನಾಡು ಸರ್ಕಾರ ಘೋಷಣೆ

Published : Aug 17, 2017, 05:07 PM ISTUpdated : Apr 11, 2018, 12:36 PM IST
ಅಮ್ಮಾ ಸಾವಿನ ತನಿಖೆ ನಡೆಸುವುದಾಗಿ ತಮಿಳುನಾಡು ಸರ್ಕಾರ ಘೋಷಣೆ

ಸಾರಾಂಶ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಾಲಲಿತಾ ಸಾವಿನ ತನಿಖೆ ನಡೆಸುವುದಾಗಿ ತಮಿಳುನಾಡು ಸರ್ಕಾರ ಘೋಷಿಸಿದೆ. ಇಂದು ಅವಸರವಸರವಾಗಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ, ಜಯಾಲಲಿತಾ ಸಾವಿನ ತನಿಖೆಯನ್ನು ನಡೆಸುವುದಾಗಿ ಘೋಷಿಸಿದರು.

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಾಲಲಿತಾ ಸಾವಿನ ತನಿಖೆ ನಡೆಸುವುದಾಗಿ ತಮಿಳುನಾಡು ಸರ್ಕಾರ ಘೋಷಿಸಿದೆ.

ಇಂದು ಅವಸರವಸರವಾಗಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ, ಜಯಾಲಲಿತಾ ಸಾವಿನ ತನಿಖೆಯನ್ನು ನಡೆಸುವುದಾಗಿ ಘೋಷಿಸಿದರು.

ಆದರೆ ತನಿಖೆಯನ್ನು ಯಾರು ನಡೆಸಲಿದ್ದಾರೆ ಎಂಬುವುದನ್ನು ತಿಳಿಸದ ಅವರು, ಮಾಜಿ ನ್ಯಾಯಾಧೀಶರ ಹೆಸರನ್ನು ಶೀಘ್ರದಲ್ಲೇ ಘೋಷಿಸಿಸುವುದಾಗಿ ಹೇಳಿದ್ದಾರೆ.

ಅಮ್ಮಾ ಸಾವಿನ ತನಿಖೆಯಾಗಬೇಕೆಂದು ವ್ಯಾಪಕವಾಗಿ ಮನವಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದ ಪಳನಿಸ್ವಾಮಿ, ಈ ಬಗ್ಗೆ ಗಹನವಾದ ಸಮಾಲೋಚನೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್ 22 ರಂದು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಜಯಲಲಿತಾ ಚಿಕಿತ್ಸೆ ಫಲಕಾರಿಯಾಗದೆ ಡಿಸೆಂಬರ್ 5 ರಂದು ಅಕಾಲಿಕ ಹೃದಯಾಘಾತಕ್ಕೆ ತುತ್ತಾಗಿ ಮೃತಪಟ್ಟಿದ್ದರು.

ಜಯಲಲಿತಾ ಸಾವು ಪ್ರಕರಣ ಕುರಿತು ಸಿಬಿಐ ತನಿಖೆ ಆದೇಶಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು.

ಈ ಹಿಂದೆ ಜಯಾ ಸಾವಿನ ಬಗ್ಗೆ ಹಲವು ಅನುಮಾನ ವ್ಯಕ್ತವಾಗಿದ್ದವು. ತಮಿಳು ಚಿತ್ರನಟಿ ಗೌತಮಿ ಕೂಡ ಜಯಾ ಅವರ ಬಗ್ಗೆ ಅನುಮಾನ ವ್ಯಕ್ತಪಡಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯುಪಿಎಸ್‌ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
ಜಾಗತಿಕ ಶಾಂತಿ-ಸೌಹಾರ್ದತೆಗೆ ಧ್ಯಾನವೇ ಮಾರ್ಗ: ವಿಶ್ವಸಂಸ್ಥೆಯಲ್ಲಿ ರವಿಶಂಕರ್ ಗುರೂಜಿ ಸಂದೇಶ