
ಬೆಂಗಳೂರು(ಏ. 11): ವಿಧಾನಸೌಧದಲ್ಲಿ ಸಚಿವ ತನ್ವೀರ್ ಸೇಠ್ ಮೇಲೆ ಹಲ್ಲೆ ನಡೆದ ಘಟನೆ ವರದಿಯಾಗಿದೆ. ಮೈಸೂರು ಎಸ್ಸಿ-ಎಸ್ಟಿ ನೌಕರರ ಸಂಘದ ಗೌರವಾಧ್ಯಕ್ಷ ಶಾಂತರಾಜು ಎಂಬುವವರು ತನ್ವೀರ್ ಸೇಠ್'ರ ಕೊರಳಪಟ್ಟಿ ಹಿಡಿದು ದಾಂಧಲೆ ನಡೆಸಿದ ಆರೋಪ ಎದುರಿಸುತ್ತಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರು ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಶಾಂತರಾಜು ರಿಯಾಕ್ಷನ್:
ಪಿಯುಸಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯಲ್ಲಿ ಎಸ್ಸಿ-ಎಸ್ಟಿ ಅಭ್ಯರ್ಥಿಗಳಿಗೆ ಶೇ.5ರಷ್ಟು ವಿನಾಯಿತಿ ನೀಡಬೇಕೆಂದಷ್ಟೇ ತಾನು ಮನವಿಕೊಂಡಿದ್ದು ಎಂದು ಶಾಂತರಾಜು ಸ್ಪಷ್ಟಪಡಿಸಿದ್ದಾರೆ. ಎಲ್ಲಾ ಇಲಾಖೆಗಳು ಎಸ್ಸಿ-ಎಸ್ಟಿ ಜನಾಂಗದವರಿಗೆ ವಿನಾಯಿತಿ ಕೊಡುತ್ತಿವೆ. ನಿಮ್ಮ ಇಲಾಖೆಯಲ್ಲೂ ಅದಕ್ಕೆ ಅವಕಾಶ ಮಾಡಿಕೊಡಿ ಎಂದು ತಾನು ಆ ವಿಷಯ ಪ್ರಸ್ತಾಪಿಸುತ್ತಿದ್ದಂತೆಯೇ "ಕುರ್ಚಿಯಿಂದ ಮೇಲೆದ್ದ ಸಚಿವರು, ಹೊಲೆ-ಮಾದಿಗರದ್ದೇ ನಮಗೆ ಕೆಲಸವೇನ್ರೀ ಎಂದು ರೇಗಿದರು" ಎಂದು ಶಾಂತರಾಜು ಹೇಳುತ್ತಾರೆ.
ಇದೇ ವೇಳೆ, ತನ್ವೀರ್ ಸೇಠ್ ವಿರುದ್ಧವೇ ತಾನು ದೂರು ದಾಖಲಿಸುತ್ತಿರುವುದಾಗಿಯೂ ಶಾಂತರಾಜು ಸುವರ್ಣನ್ಯೂಸ್'ಗೆ ತಿಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.