
ಮೈಸೂರು: ನರಸಿಂಹರಾಜ ಕ್ಷೇತ್ರಕ್ಕೆ ಬಂದು ಶಕ್ತಿ ಪ್ರದರ್ಶನ ಮಾಡುವುದಾಗಿ ಹೇಳಿದ್ದ ಸಚಿವ ಜಮೀರ್ ಅಹ್ಮದ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಶಾಸಕ ತನ್ವೀರ್‌ಸೇಠ್, ಶಕ್ತಿ ಪ್ರದರ್ಶ ನವೆಂದರೆ ಜನರನ್ನು ಸೇರಿಸಿ ತೋರಿಸುವುದಲ್ಲ, ಜನರ ಮನಸ್ಸನ್ನು ಗೆದ್ದು ತೋರಿಸುವುದು ಎಂದು ತಿರುಗೇಟು ನೀಡಿದ್ದಾರೆ. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮೀರ್ ಅಹ್ಮದ್ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದರು.
ನಮ್ಮ ಜನಾಂಗ ಒಪ್ಪಿಕೊಳ್ಳುವ ನಾಯಕತ್ವ ಅವನಲ್ಲಿ ಇಲ್ಲ. ಕಳೆದ ಚುನಾವಣೆಯಲ್ಲಿ ಕೆಟ್ಟ ಹುಳುವಾಗಿ ಬೆಳೆದಿರುವವರ ಪರವಾಗಿ ಜಮೀರ್ ಕೆಲಸ ಮಾಡಿದ. ನಾನು ಮಾಧ್ಯಮಗಳ ಮುಂದೆ ಸಂಘರ್ಷಕ್ಕೆ ಇಳಿಯುವುದಿಲ್ಲ. ರಾಜಕೀಯವಾಗಿ ಅಥವಾ ವೈಯಕ್ತಿಕವಾಗಿ ಸಂಘರ್ಷಕ್ಕೆ ಸಿದ್ಧ ಎಂದು ಸವಾಲು ಹಾಕಿದರು. ಜಮೀರ್ ನೀಡಿರುವ ಸವಾಲನ್ನು ಸ್ವೀಕರಿಸುವುದೂ ಇಲ್ಲ, ತಳ್ಳಿ ಹಾಕುವುದೂ ಇಲ್ಲ. ಕ್ಷೇತ್ರಕ್ಕೆ ಬರೋದು ಬಿಡೋದು ಅವರಿಗೆ ಬಿಟ್ಟದ್ದು.
ಈ ಬಗ್ಗೆ ವರಿಷ್ಠರ ಗಮನಕ್ಕೆ ತಂದಿದ್ದೇನೆ. ನಿನ್ನೆ ಮೊನ್ನೆ ಪಕ್ಷಕ್ಕೆ ಬಂದವರಿಗೆ ಕಾಂಗ್ರೆಸ್ ತತ್ವ ಸಿದ್ಧಾಂತ ಗೊತ್ತಿರೋಲ್ಲ. ಇದಕ್ಕಾಗಿ ಅವರನ್ನು ವಿರೋಧಿಸಿದ್ದೇನೆ ಎಂದರು. ನಾವು ಸಂಘಟಿತರಾಗಿ ಸ್ಥಾನ ಕೇಳುತ್ತಿಲ್ಲ ಎಂಬುದು ನನ್ನ ಅಭಿಪ್ರಾಯ. ಪಕ್ಷಕ್ಕೆ ಮುಜುಗರ ತರುವಂತೆ ಮಾತನಾಡ ಬೇಡಿ ಎಂದು ಹೈಕಮಾಂಡಿನಿಂದ ಸೂಚನೆ ಬಂದಿದ್ದು ಅದನ್ನು ಪಾಲಿಸುತ್ತಿದ್ದೇನೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.