
ಬೆಳಗಾವಿ(ಮಾ.24): ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಗೆ ಕಾಂಗ್ರೆಸ್ ಸರ್ಕಾರ ಕಾರಣ ಎಂದು ವಿಧಾನ ಪರಿಷತ್ ಸದಸ್ಯೆ, ಬಿಜೆಪಿ ನಾಯಕಿ ತಾರಾ ಅನೂರಾಧ ಆರೋಪಿಸಿದರು.
ನಗರದ ಕಣಬರ್ಗಿಯಲ್ಲಿ ಶುಕ್ರವಾರ ಬಿಜೆಪಿ ಹಮ್ಮಿಕೊಂಡಿದ್ದ ಮುಷ್ಟಿಧಾನ್ಯ ಅಭಿಯಾನದಲ್ಲಿ ಮಾತನಾಡಿ, ರಾಜ್ಯದಲ್ಲಿ ಹಿಂದೂ ವಿರೋಧಿ ಸರ್ಕಾರ ಅಧಿಕಾರದಲ್ಲಿದೆ. ಇಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನೇ ಗುರಿಯನ್ನಾಗಿಸಿ ದಾಳಿ ಮಾಡಲಾಗುತ್ತದೆ ಎಂದು ದೂರಿದರು.
ರೈತ ಬೆಳೆದ ಬೆಳೆಗೆ ಸೂಕ್ತ ಬೆಂಬಲ ಬೆಲೆ ಇಲ್ಲದೆ ರೈತರು ಆತ್ಮಹತ್ಯೆ ಮಾಡಿಕೊಳ್ಳಲು ಕಾಂಗ್ರೆಸ್ ಸರ್ಕಾರ ಪ್ರೇರಿಪೇಸುತ್ತಿದೆ. ರೈತರ ಸಾವಿಗೆ .5 ಲಕ್ಷ ಬೆಲೆ ಕಟ್ಟಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರೈತ ವಿರೋಧಿಯಾಗಿದೆ. ಸರ್ಕಾರದ ಈ ನೀತಿಯಿಂದಾಗಿ ರಾಜ್ಯದಲ್ಲಿ ಸುಮಾರು 3 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ರೈತ ನಾಯಕರು. ಅವರು ಮುಖ್ಯಮಂತ್ರಿಯಾಗಿದ್ದಾಗ ರೈತರ ಪರ, ಜನಪರ ಆಡಳಿತ ನೀಡಿದ್ದರು ಎಂದು ತಾರಾ ತಿಳಿಸಿದರು.
ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಿಗಳಿಗೆ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಲು ಬಿಡುತ್ತಿಲ್ಲ. ರಾಜ್ಯದಲ್ಲಿ ಅತ್ಯಾಚಾರ, ಅಪಹರಣ ಕೃತ್ಯಗಳು ದಿನೇ ದಿನೆ ಹೆಚ್ಚಾಗುತ್ತಿವೆ. ಮಹಾದಾಯಿ ನದಿ ವಿವಾದದ
ವಿಚಾರದಲ್ಲೂ ರಾಜ್ಯ ಸರ್ಕಾರ ಮೌನ ವಹಿಸಿದೆ. ಇದೊಂದು ನಿರ್ಲಜ್ಜ ಸರ್ಕಾರ. ಇಂತಹ ಸರ್ಕಾರವನ್ನು ರಾಜ್ಯದಿಂದ ಕಿತ್ತೊಗೆಯುವ ಮೂಲಕ ಕರ್ನಾಟಕವನ್ನು ಕಾಂಗ್ರೆಸ್ ಮುಕ್ತಗೊಳಿಸಬೇಕು. ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಲು ಅವಕಾಶ ಮಾಡಿಕೊಡಬೇಕು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.