
ನವದೆಹಲಿ: ವಿವಿಧ ವೇಷ ತೊಟ್ಟು ಸಂಸತ್ತಿಗೆ ಆಗಮಿಸಿ ಎಲ್ಲರ ಗಮನ ಸೆಳೆಯುವ ಟಿಡಿಪಿ ಸಂಸದ, ಮಾಜಿ ನಟ ನರಮಲ್ಲಿ ಶಿವಪ್ರಸಾದ್, ಗುರುವಾರ, ಜರ್ಮನಿಯ ಮಾಜಿ ಸರ್ವಾಧಿಕಾರಿ ಹಿಟ್ಲರ್ ವೇಷದಲ್ಲಿ ಆಗಮಿಸಿ ವಿಶೇಷ ರೀತಿಯಲ್ಲಿ ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದರು.
ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂಬ ಟಿಡಿಪಿಯ ಆಗ್ರಹವನ್ನು ಪುನರುಚ್ಚರಿಸುವ ನಿಟ್ಟಿನಲ್ಲಿ ಮತ್ತು ಈ ವಿಷಯದಲ್ಲಿ ಕೇಂದ್ರ ಸರ್ಕಾರದ ನಿರ್ಲಕ್ಷ್ಯವನ್ನು ವಿರೋಧಿಸುವ ನಿಟ್ಟಿನಲ್ಲಿ ಶಿವಪ್ರಸಾದ್ ಅವರು ಹಿಟ್ಲರ್ ವೇಷ ಧರಿಸಿ ಬಂದಿದ್ದರು.
ಕೆಲ ದಿನಗಳ ಹಿಂದಷ್ಟೇ ಅವರು ಶ್ರೀರಾಮನ ಅವತಾರದಲ್ಲಿ, ಅದಕ್ಕೂ ಮೊದಲು ನಾರದ, ಸತ್ಯಸಾಯಿ ಸೇರಿದಂತೆ ವಿನೂತನ ಶೈಲಿಯಲ್ಲಿ ವೇಷ ಧರಿಸಿ ಸಂಸತ್ತಿಗೆ ಆಗಮಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.