
ಚೆನ್ನೈ(ಡಿ.06): ತಮಿಳುನಾಡು ಸಿಎಂ ವಿಧಿವಶರಾಗಿದ್ದಾರೆ. ಇವರ ಅಂತಿಮ ದರ್ಶನಕ್ಕೆ ಅಪಾರ ಜನಸ್ತೋಮ ಆಗಮಿಸುತ್ತಿದೆ. ಚಿತ್ರನಟರು ಹಾಗೂ ಗಣ್ಯರು ಜಯಲಲಿತಾರಿಗೆ ಸಂತಾಪ ಸೂಚಿಸಿದ್ದಾರೆ.
ಸಿಎಂ ಜಯಲಲಿತಾ ಅಂತಿಮ ದರ್ಶನಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಆಗಮನ ಖಚಿತವಾಗಿತ್ತು. ಇದೇ ಹಿನ್ನೆಲೆಯಲ್ಲಿ ತಮಿಳುನಾಡಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ದೆಹಲಿಯಿಂದ ವಿಮಾನದ ಮೂಲಕಪ್ರಯಾಣ ಬೆಳೆಸಿದ್ದರು. ಆದರೆ ಈ ವೇಳೆ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ಪರಿಣಾಮ ರಾಷ್ಟ್ರಪತಿ ದೆಹಲಿಗೆ ಹಿಂತಿರುಗಿದ್ದಾರೆ.
ಅಂತಿಮ ದರ್ಶನಕ್ಕೆ ರಾಷ್ಟ್ರಪತಿ ಹಾಜರಾಗುತ್ತಾರಾ ಎನ್ನುವ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.