
ಕೊಯಮತ್ತೂರು[ಜು.03]: ಯುದ್ಧ ವಿಮಾನ ತೇಜಸ್ ಹಾರಾಟ ಆರಂಭಿಸಿದ ಕೆಲ ಹೊತ್ತಲ್ಲೇ ಅದರ ಪೆಟ್ರೋಲ್ ಟ್ಯಾಂಕ್ ಕೆಳಕ್ಕೆ ಕಳಚಿ ಬಿದ್ದ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ಮಂಗಳವಾರ ಜರುಗಿದೆ.
ಪೆಟ್ರೋಲ್ ಟ್ಯಾಂಕ್ ಕೆಳಗೆ ಬಿದ್ದ ಪರಿಣಾಮ ಸುಮಾರು 3 ಅಡಿಗಳಷ್ಟುದೊಡ್ಡ ಗುಂಡಿ ನಿರ್ಮಾಣವಾಗಿದೆ. ಸುಮಾರು 1200 ಲೀಟರ್‌ನಷ್ಟು ಪೆಟ್ರೋಲ್ ಇದ್ದ ಟ್ಯಾಂಕ್ ನಿರ್ಜನ ಪ್ರದೇಶದಲ್ಲಿ ಬಿದ್ದ ಕಾರಣ ದೊಡ್ಡ ಅನಾಹುತ ತಪ್ಪಿದೆ.
ಇಂಧನ ಟ್ಯಾಂಕ್ ಕಳಚಿಕೊಂಡ ಬೆನ್ನಲ್ಲೇ ವಿಮಾನವನ್ನು ಸಮೀಪದಲ್ಲೇ ಇದ್ದ ಸುಲೂರು ವಾಯುನೆಲೆಯಲ್ಲಿ ಸುರಕ್ಷಿತವಾಗಿ ಇಳಿಸಲಾಗಿದೆ. ಘಟನೆಯಲ್ಲಿ ವಿಮಾನದಲ್ಲಿದ ಸಿಬ್ಬಂದಿ ಯಾವುದೇ ತೊಂದರೆಯಾಗಿಲ್ಲ.
ಈ ನಡುವೆ ಇಂಧನ ಟ್ಯಾಂಕ್ ಉರುಳಿಬಿದ್ದ ಘಟನೆ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.