ಮೋದಿ, ನಿತೀಶ್‌ ಕುಮಾರ್ ವಿರುದ್ಧ 2500 ಕೋಟಿ ರು. ಹಗರಣ

Published : Jun 29, 2018, 10:18 AM IST
ಮೋದಿ,  ನಿತೀಶ್‌ ಕುಮಾರ್ ವಿರುದ್ಧ 2500 ಕೋಟಿ ರು. ಹಗರಣ

ಸಾರಾಂಶ

2500 ಕೋಟಿ ರು. ಮೌಲ್ಯದ ಸೃಜನ್‌ ಸ್ವಯಂಸೇವಾ ಸಂಸ್ಥೆಯ ಭಾರೀ ಪ್ರಮಾಣದ ಹಗರಣದಲ್ಲಿ ಪ್ರಮುಖ ರಾಜಕಾರಣಿಗಳು ಭಾಗಿಯಾಗಿದ್ದಾರೆ ಎಂದು ಅವರು ಕೆಲವು ದಾಖಲೆಗಳನ್ನು ಆಧಾರವಾಗಿ ಇಟ್ಟುಕೊಂಡು  ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್  ಆರೋಪಿಸಿದ್ದಾರೆ.

ಪಟನಾ: ಜೆಡಿಯು ಹಾಗೂ ಆರ್‌ಜೆಡಿ ಮತ್ತೆ ಒಂದಾಗಬಹುದು ಎಂಬ ಗುಸುಗುಸು ಎದ್ದಿರುವ ನಡುವೆಯೇ ಅಂಥ ಸಾಧ್ಯತೆ ಇಲ್ಲ ಎಂಬಂತಹ ಹೊಸ ಬಾಂಬ್‌ ಅನ್ನು ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್‌ ಸಿಡಿಸಿದ್ದಾರೆ. ಮುಖ್ಯಮಂತ್ರಿ ನಿತೀಶ್‌ಕುಮಾರ್‌ ಹಾಗೂ ಉಪಮುಖ್ಯಮಂತ್ರಿ ಸುಶೀಲ್‌ ಮೋದಿ ಅವರು 2500 ಕೋಟಿ ರು. ಮೌಲ್ಯದ ಸೃಜನ್‌ ಸ್ವಯಂಸೇವಾ ಸಂಸ್ಥೆ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಅವರು ಕೆಲವು ದಾಖಲೆಗಳನ್ನು ಆಧಾರವಾಗಿ ಇಟ್ಟುಕೊಂಡು ಆರೋಪಿಸಿದ್ದಾರೆ.

ಗುರುವಾರ ಈ ಕುರಿತ ಬ್ಯಾಂಕ್‌ ಸ್ಟೇಟ್‌ಮೆಂಟ್‌ ದಾಖಲೆಗಳನ್ನು ಬಿಡುಗಡೆ ಮಾಡಿ ಮಾತನಾಡಿರುವ ಅವರು. ಸುಶೀಲ್‌ ಮೋದಿ ಅವರ ಸೋದರಿ ರೇಖಾ ಹಾಗೂ ಬಂಧು ಊರ್ವಶಿ ಅವರು ಬಹುಕೋಟಿ ಸೃಜನ್‌ ಹಗರಣದ ಫಲಾನುಭವಿಗಳು. ಇವರು ಕೋಟ್ಯಂತರ ರುಪಾಯಿಗಳನ್ನು ಇದರಲ್ಲಿ ಸಂಪಾದಿಸಿದ್ದಾರೆ. ಇವೆಲ್ಲ ಸುಶೀಲ್‌ ಮೋದಿ ಹಾಗೂ ನಿತೀಶ್‌ಗೆ ಗೊತ್ತಿದ್ದರೂ ಸುಮ್ಮನಿದ್ದಾರೆ. ಈ ಮೂಲಕ ಹಗರಣಕ್ಕೆ ಪರೋಕ್ಷ ಸಹಕಾರ ನೀಡಿದ್ದಾರೆ ಎಂದು ಆರೋಪಿಸಿದರು. ಈ ಬಗ್ಗೆ ಸಿಬಿಐ ಹಾಗೂ ತನಿಖಾ ಸಂಸ್ಥೆಗಳ ಮೌನವೇಕೆ ಎಂದವರು ಪ್ರಶ್ನಿಸಿದರು.

ಏನಿದು ಹಗರಣ?:  ಸೃಜನ್‌ ಎಂಬುದು ಮಹಿಳಾ ಅಭಿವೃದ್ಧಿ ಹಾಗೂ ವೃತ್ತಿಪರ ತರಬೇತಿ ಸ್ವಯಂಸೇವಾ ಸಂಸ್ಥೆಯಾಗಿದೆ. ಸರ್ಕಾರ ಹಾಗೂ ಕೆಲ ಬ್ಯಾಂಕ್‌ ಅಧಿಕಾರಿಗಳ ಜತೆ ಶಾಮೀಲಾಗಿ ಅಕ್ರಮವಾಗಿ ಸರ್ಕಾರದ ಅನುದಾನವನ್ನು ಪಡೆದುಕೊಂಡು ಅದನ್ನು ಇನ್ನಾರಿಗೋ ಸಾಲವಾಗಿ ನೀಡುತ್ತಿತ್ತು ಎಂದು ಆರೋಪಿಸಲಾಗಿದೆ. ಸಂಸ್ಥೆಯ ಮುಖ್ಯಸ್ಥೆ ಮನೋರಮಾ ದೇವಿ ಕಳೆದ ವರ್ಷ ನಿಧನಳಾದ ಬಳಿಕ, ಸಾಲ ಪಡೆದವರು ಮರುಪಾವತಿಸದೇ ಕೈಎತ್ತಿದರು. ಆಗ ಈ ಹಗರಣ ಬೆಳಕಿಗೆ ಬಂತು. 2004ರಿಂದಲೇ ಈ ವ್ಯವಹಾರ ನಡೆಯುತ್ತಿತ್ತು ಎಂದು ದೂರಲಾಗಿದೆ. ಈ ಹಗರಣವು 2013ರಲ್ಲಿ ವಿತ್ತ ಸಚಿವರಾಗಿದ್ದ ಸುಶೀಲ್‌ ಮೋದಿಗೆ ಗೊತ್ತಿತ್ತು ಎಂಬುದು ಆರ್‌ಜೆಡಿ ಆರೋಪ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗ್ಯಾಸ್ ಸಿಲಿಂಡರ್ ಸ್ಫೋಟ: ಗೋವಾ ಕ್ಲಬ್‌ನಲ್ಲಿ ಅಗ್ನಿ ಅವಘಡ, 23 ಸಾವು
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ