ಬಿಜೆಪಿ ಶಾಸಕ ರಾಜೀನಾಮೆ

Published : Aug 13, 2018, 12:27 PM ISTUpdated : Sep 09, 2018, 08:33 PM IST
ಬಿಜೆಪಿ ಶಾಸಕ ರಾಜೀನಾಮೆ

ಸಾರಾಂಶ

ಬಿಜೆಪಿ ಶಾಸಕರೋರ್ವರು ಇದೀಗ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಬಿಜೆಪಿ ರಾಜ್ಯಾಧ್ಯಕ್ಷರಿಗೆ ರವಾನೆ ಮಾಡಿದ್ದಾರೆ. 

ತೆಲಂಗಾಣ:  ಗೋ ಹತ್ಯೆ  ಪ್ರಕರಣಗಳು ಹೆಚ್ಚಾಗುತ್ತಿದ್ದು, ತಮ್ಮ ಪಕ್ಷದಿಂದ ಗೋ ಹತ್ಯೆಯನ್ನು ತಡೆಯಲು ಯಾವುದೇ ರೀತಿಯ ಬೆಂಬಲ ನೀಡುತ್ತಿಲ್ಲ ಎನ್ನುವ ಕಾರಣದಿಂದ ತೆಲಂಗಾಣ ಬಿಜೆಪಿ ಶಾಸಕ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 

ಗೋಶ್ ಮಹಲ್ ಕ್ಷೇತ್ರದ ಬಿಜೆಪಿ ಶಾಸಕ ಟಿ. ರಾಜಾ ಸಿಂಗ್ ಲೋದ್ ಅವರು ಪಕ್ಷದಿಂದ ಈ ನಿಟ್ಟಿನಲ್ಲಿ ತಮಗೆ ಯಾವುದೇ ಸಗಕಾರ ದೊರೆಯುತ್ತಿಲ್ಲ. ಮುಂದಿನ ಈದ್ ಉಲ್ ಅಝ್ಹಾ ದಂದು ನಡೆಯುವ ಗೋವುಗಳ ಹತ್ಯೆಯನ್ನು ತಡೆಯುವುದು ಇದರಿಂದ ಆಗುತ್ತಿಲ್ಲ. ಆದ್ದರಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ. 

ಸಾಮಾಜಿಕ ಜಾಲತಾಣದಲ್ಲಿ ಈ ನಿಟ್ಟಿನಲ್ಲಿ ವಿಡಿಯೋ ಮೆಸೇಜ್ ಒಂದನ್ನು ಪೋಸ್ಟ್ ಮಾಡಿದ ರಾಜಾ ಅವರು ತೆಲಂಗಾಣ ಬಿಜೆಪಿ ಅಧ್ಯಕ್ಷ ಕೆ. ಲಕ್ಷ್ಮಣ್  ಅವರಿಗೆ ರಾಜೀನಾಮೆ ಪತ್ರವನ್ನು ಕಳುಹಿಸಿದ್ದಾಗಿ ಹೇಳಿದ್ದಾರೆ. 

ತಮ್ಮ ಪ್ರಕಾರ ಹಿಂದೂ ಧರ್ಮದಲ್ಲಿ ಗೋವು ರಕ್ಷಣೆ ಎನ್ನುವುದು ಅತ್ಯಂತ ಪ್ರಮುಖವಾದ ವಿಚಾರವಾಗಿದೆ.  ನಂತರ ರಾಜಕೀಯ. ಆದರೆ ಇಲ್ಲಿದ್ದು ನನಗೆ ಗೋವುಗಳ ರಕ್ಷಣೆ ಮಾಡಲಾಗುತ್ತಿಲ್ಲ ಆದ್ದರಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಉಡುಪಿ: ವರನಿಗೆ ರಜೆ ಸಿಗದ ಕಾರಣ ವಿಡಿಯೋ ಮೂಲಕ ಅದ್ಧೂರಿ ನಿಶ್ಚಿತಾರ್ಥ! ಫೋಟೋ ಇಲ್ಲಿವೆ ನೋಡಿ
ಕಡಿಮೆ ಬಿಯರ್ ಉತ್ಪಾದನೆಗೆ ಯುಬಿ ಕಂಪನಿಗೆ ವಿಧಿಸಿದ್ದ 29 ಕೋಟಿ ರೂ. ದಂಡ ರದ್ದು!