
ಹೈದರಾಬಾದ್: ತೆಲಂಗಾಣ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್)ಯನ್ನು ಅಧಿಕಾರಕ್ಕೆ ತಂದಿರುವ ಆ ಪಕ್ಷದ ಪರಮೋಚ್ಚ ನಾಯಕ ಕೆ. ಚಂದ್ರಶೇಖರ ರಾವ್ ರಾಷ್ಟ್ರ ರಾಜಕಾರಣದಲ್ಲಿ ಹೆಚ್ಚು ಗಮನಹರಿಸಲು ಸಿದ್ಧತೆಯಲ್ಲಿ ತೊಡಗಿದ್ದಾರೆ.
ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಮಟ್ಟದಲ್ಲಿ ಸಕ್ರಿಯ ಪಾತ್ರ ನಿರ್ವಹಿಸುವ ಸಲುವಾಗಿ ತಮ್ಮ ಪುತ್ರ, ಮಾಜಿ ಸಚಿವ ಕೆ.ಟಿ. ರಾಮರಾವ್ ಅವರಿಗೆ ಪಕ್ಷದ ಹೊಣೆಯನ್ನು ರಾವ್ ವಹಿಸಿದ್ದು, ಕಾರ್ಯಾಧ್ಯಕ್ಷ ಹುದ್ದೆಗೆ ನೇಮಕ ಮಾಡಿದ್ದಾರೆ.
‘ಕೆಸಿಆರ್ ಅವರು ರಾಷ್ಟ್ರ ರಾಜಕಾರಣದಲ್ಲಿ ಹೆಚ್ಚು ಗಮನಹರಿಸಬೇಕಿರುವುದರಿಂದ ಹಾಗೂ ರಾಜ್ಯದಲ್ಲಿ ವಿವಿಧ ಅಭಿವೃದ್ಧಿ ಚಟುವಟಿಕೆಗಳನ್ನು ನೋಡಿಕೊಳ್ಳಬೇಕಾಗಿರುವುದರಿಂದ ರಾಮರಾವ್ ಅವರನ್ನು ಕಾರ್ಯಾದ್ಯಕ್ಷ ಹುದ್ದೆಗೆ ನೇಮಕ ಮಾಡಲಾಗಿದೆ’ ಎಂದು ಪಕ್ಷದ ಅಧಿಕೃತ ಪ್ರಕಟಣೆ ತಿಳಿಸಿದೆ. ರಾಮರಾವ್ ಅವರು ಟಿಆರ್‌ಎಸ್‌ನ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ಇನ್ನೈದು ವರ್ಷ ಗಡ್ಡ ಬೋಳಿಸೋಲ್ಲ
ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದ ಬಳಿಕ ಪ್ರತಿಕ್ರಿಯೆ ನೀಡಿದ್ದ ಕೆಸಿಆರ್, ರಾಷ್ಟ್ರೀಯ ಪಕ್ಷಗಳನ್ನು ಎದುರಿಸಲು ಪ್ರಾದೇಶಿಕ ಪಕ್ಷಗಳನ್ನು ಒಳಗೊಂಡ ಕಾಂಗ್ರೆಸ್ಸೇತರ ಹಾಗೂ ಬಿಜೆಪಿಯೇತರ ಒಕ್ಕೂಟ ರಚಿಸಲಾಗುತ್ತದೆ. ಕಾಂಗ್ರೆಸ್ ಮುಕ್ತ ಭಾರತ, ಬಿಜೆಪಿ ಮುಕ್ತ ಭಾರತದ ಅಗತ್ಯವಿದೆ ಎಂದಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ