ರಾಜಸ್ಥಾನ, ತೆಲಂಗಾಣ ವಿಧಾನಸಭೆಗೆ ಚುನಾವಣೆ ಆರಂಭ

By Web DeskFirst Published Dec 7, 2018, 10:09 AM IST
Highlights

ರಾಜಸ್ಥಾನದ 199 ಕ್ಷೇತ್ರಗಳಿಗೆ ಹಾಗೂ ತೆಲಂಗಾಣದಲ್ಲಿ 119 ಕ್ಷೇತ್ರಗಳಿಗೆ ವಿಧಾನಸಭಾ ಚುನಾವಣಾ ಮತದಾನ ಆರಂಭವಾಗಿದೆ.

ಜೈಪುರ/ ಹೈದರಾಬಾದ್‌[ಡಿ.07]: ತೆಲಂಗಾಣ ಹಾಗೂ ರಾಜಸ್ಥಾನ ವಿಧಾನಸಭೆಗಳಿಗೆ ಶುಕ್ರವಾರ ಚುನಾವಣೆ ಆರಂಭವಾಗಿದೆ. ರಾಜಸ್ಥಾನದ 199 ಕ್ಷೇತ್ರಗಳಿಗೆ 2000ಕ್ಕೂ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮತದಾನಕ್ಕಾಗಿ 51,687 ಮತಗಟ್ಟೆಗಳನ್ನು ತೆರೆಯಲಾಗಿದ್ದು, 259 ಮತಗಟ್ಟೆಗಳನ್ನು ಮಹಿಳಾ ಅಧಿಕಾರಿಗಳು ಹಾಗೂ ಭದ್ರತಾ ಸಿಬ್ಬಂದಿಯೇ ನಿರ್ವಹಿಸುತ್ತಿದ್ದಾರೆ.

"

ಇದೇ ವೇಳೆ ತೆಲಂಗಾಣದಲ್ಲಿ 119 ಕ್ಷೇತ್ರಗಳಿಗೆ ಮತದಾನ ಆರಂಭವಾಗಿದ್ದು, 32,815 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಚುನಾವಣಾ ಕಾರ್ಯಕ್ಕೆ 1.50 ಲಕ್ಷ ಸಿಬ್ಬಂದಿ ನಿಯೋಜಿಸಲಾಗಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಮಧ್ಯೆ ನೇರ ಹಣಾಹಣಿ ಏರ್ಪಟ್ಟಿದ್ದರೆ, ತೆಲಂಗಾಣದಲ್ಲಿ ಟಿಆರ್‌ಎಸ್‌, ಕಾಂಗ್ರೆಸ್‌ ಹಾಗೂ ಬಿಜೆಪಿ ಮಧ್ಯೆ ತ್ರಿಕೋಣ ಸ್ಪರ್ಧೆ ಏರ್ಪಟ್ಟಿದೆ.

ಡಿ.11ರಂದು ಮಧ್ಯ ಪ್ರದೇಶ, ರಾಜಸ್ಥಾನ, ತೆಲಂಗಾಣ, ಛತ್ತೀಸ್‌ಗಢ ಹಾಗೂ ಮಿಜೋರಾಂ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬೀಳಲಿದೆ.

click me!