
ಹೈದ್ರಾಬಾದ್(ಜೂ.25): ಟಾಲಿವುಡ್ ನಟ ರವಿತೇಜಾ ಸಹೋದರ ಭರತ್ ರಾಜು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಹೈದ್ರಾಬಾದ್'ನ ಕೊತ್ವಾಲ್‌ಗೂಡಾದ ಔಟರ್ ರಿಂಗ್ ರೋಡ್ ಬಳಿ ಭೀಕರ ಅಪಘಾತ ಸಂಭವಿಸಿದ್ದು ಭರತ್ ಸ್ಥಳದಲ್ಲೇ ಅಸುನೀಗಿದ್ದಾರೆ. ಭರತ್ ಅತಿವೇಗವಾಗಿ ಕಾರು ಚಲಿಸುತ್ತಿದ್ದು, ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ.
ಹಲವು ತೆಲುಗು ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದ ಭರತ್ ರಾಜು ವಿವಾದಗಳ ಮೂಲಕವೇ ಸುದ್ದಿಯಾಗಿದ್ದರು. ಮಾದಕ ವಸ್ತು ಪ್ರಕರಣವೊಂದರಲ್ಲಿ ಭರತ್ ರಾಜು ಹೆಸರು ಕೇಳಿಬಂದಿತ್ತು. ಹೀಗಾಗಿ ಕಳೆದ ಕೆಲ ವರ್ಷಗಳಿಂದ ಚಿತ್ರರಂಗದಿಂದ ದೂರ ಉಳಿದಿದ್ದರು.
ಭರತ್‌ರಾಜು ನಿಧನಕ್ಕೆ ತೆಲುಗು ಚಿತ್ರರಂಗದ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.