
ವಾಷಿಂಗ್ಟನ್(ಆ.23): ಹೋದಲ್ಲಿ ಬಂದಲ್ಲಿ ಭಾರತದ ವಿರುದ್ಧ ಕತ್ತಿ ಮಸೆಯುತ್ತಿರುವ ಪಾಕಿಸ್ತಾನಕ್ಕೆ ಜಾಗತಿಕವಾಗಿ ಮುಖಭಂಗವಾಗಿದ್ದು, ಉಗ್ರ ಪೋಷಣೆ ಮಾಡುವ ಆರೋಪದಲ್ಲಿ ಜಾಗತಿಕ ಸರ್ವೇಕ್ಷಣಾ ಸಂಸ್ಥೆ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಿದೆ.
ಕ್ಯಾನ್ ಬೆರ್ರಾದಲ್ಲಿ ನಡೆದ ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್(FATF) ಸಭೆಯಲ್ಲಿ ಪಾಕ್ ವಿರುದ್ಧದ ನಿರ್ಣಯಕ್ಕೆ ಸರ್ವಾನುಮತದ ಅಂಗೀಕಾರ ದೊರೆತಿದೆ. ಉಗ್ರ ಪೋಷಣೆಗೆ ಆರ್ಥಿಕ ನೆರವು ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನವನ್ನು 'ವರ್ಧಿತ ಕಪ್ಪುಪಟ್ಟಿಗೆ ಸೇರಿಸಲಾಗಿದೆ ಎಂದು ಫತ್ಫ್ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ಪಾಕಿಸ್ತಾನ ಉಗ್ರಗಾಮಿ ಸಂಘಟನೆಗಳ ವಿರುದ್ಧ ಕೈಗೊಂಡಿದ್ದ ಕ್ರಮಗಳು ಫತ್ಫ್'ನ ನ ಮಾನದಂಡಕ್ಕೆ ಸಮವಾಗಿಲ್ಲದ ಕಾರಣಕ್ಕೆ ಸಂಸ್ಥೆ ಈ ನಿರ್ಣಯ ಕೈಗೊಂಡಿದೆ ಎನ್ನಲಾಗಿದೆ.
ಫತ್ಫ್ ನಿಗದಿಪಡಿಸಿದ್ದ 40 ಮಾನದಂಡಗಳ ಪೈಕಿ 32 ಮಾನದಂಡಗಳಲ್ಲಿ ಪಾಕಿಸ್ತಾನ ವಿಫಲವಾಗಿದ್ದು, ಆ ರಾಷ್ಟ್ರವನ್ನ ಕಪ್ಪುಪಟ್ಟಿಗೆ ಸೇರಿಸದೇ ಬೇರೆ ವಿಧಿಯಿಲ್ಲ ಎಂದು ಫತ್ಫ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.