
ನವದೆಹಲಿ(ಆ.19): ಅನಾರೋಗ್ಯದಿಂದ ಕಳೆದ ಆ.೧೬ ರಂದು ನಿಧನರಾದ ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಅಸ್ತಿ ಕಳಸ ಯಾತ್ರೆ ಆರಂಭಗೊಂಡಿದೆ.
ಇಂದು ಬೆಳಗ್ಗೆ ರಾಷ್ಟ್ರೀಯ ಸ್ಮೃತಿ ಸ್ಥಳದಿಂದ ವಾಜಪೇಯಿ ದತ್ತು ಪುತ್ರಿ ನಮಿತಾ ಭಟ್ಟಾಚಾರ್ಯ ಹಾಗೂ ದತ್ತು ಮೊಮ್ಮಗಳು ನಿಹಾರಿಕಾ ಅಸ್ತಿ ಸಂಗ್ರಹಿಸಿಕೊಂಡು ಪ್ರೇಮ್ ಆಶ್ರಮಕ್ಕೆ ತೆಗೆದುಕೊಂಡು ಹೋದರು. ನಂತರ ಪುಣ್ಯಕ್ಷೇತ್ರ ಹರಿದ್ವಾರದಲ್ಲಿನ ಗಂಗಾ ನದಿಯಲ್ಲಿ ವಿಸರ್ಜನೆ ಮಾಡಲಾಯಿತು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉತ್ತರ ಖಂಡ್ ಮುಖ್ಯಮಂತ್ರಿ ಟಿ.ಎಸ್. ರಾವತ್ ಸೇರಿದಂತೆ ಅನೇಕ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ವಾಜಪೇಯಿ ಅವರ ಅಸ್ತಿಯನ್ನು ದೇಶದ ಪ್ರಮುಖ ನದಿಗಳಲ್ಲಿ ವಿಸರ್ಜನೆ ಮಾಡಲಾಗುತ್ತದೆ. ನಂತರ ಎಲ್ಲಾ ರಾಜ್ಯಗಳ ರಾಜಧಾನಿ ಹಾಗೂ ಜಿಲ್ಲಾ ಕೇಂದ್ರಗಳಿಗೆ ಕೊಂಡಯ್ಯಲಾಗುತ್ತದೆ.
ರಾಜ್ಯ ರಾಜಧಾನಿ, ಜಿಲ್ಲಾ ಕೇಂದ್ರ ಹಾಗೂ ಪಂಚಾಯಿತಿ ಮಟ್ಟದಲ್ಲಿ ಪ್ರಾರ್ಥನಾ ಸಭೆ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ಮುಖಂಡ ಭೂಪೇಂದ್ರ ಯಾದವ್ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.