
ನವದೆಹಲಿ[ಅ.02]: ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣ ಸಂಬಂಧ ಗೃಹ ಬಂಧನದಲ್ಲಿದ್ದ ಐವರು ಎಡಪಂಥೀಯ ವಿಚಾರವಾದಿಗಳ ಪೈಕಿ ಒಬ್ಬರಾದ ಗೌತಮ್ ನವ್‌ಲಾಖಾ ಅವರನ್ನು ದೆಹಲಿ ಹೈಕೋರ್ಟ್ ಸೋಮವಾರ ಬಿಡುಗಡೆಗೊಳಿಸಿದೆ.
ಬಂಧಿತರ ಬಿಡುಗಡೆ ಕೋರಿ ಸಲ್ಲಿಸಿದ್ದ ಅರ್ಜಿ ಬಗ್ಗೆ ಇತ್ತೀಚೆಗೆ ತೀರ್ಪು ನೀಡಿದ್ದ ಸುಪ್ರೀಂಕೋರ್ಟ್, ತಾನು ಈ ವಿಷಯದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಅರ್ಜಿದಾರರು ಸೂಕ್ತ ಕೋರ್ಟ್ ಮುಂದೆ ಈ ಕುರಿತು ಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದರು.
ಅದರಂತೆ ಗೌತಮ್ ದಿಲ್ಲಿ ಹೈಕೋರ್ಟ್ ಮೊರೆ ಹೋಗಿದ್ದರು. ಅವರ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಗೌತಮ್ ಬಿಡುಗಡೆಗೆ ಆದೇಶ ಹೊರಡಿಸಿದೆ. ಆದರೆ, ಇನ್ನುಳಿದ ನಾಲ್ವರ ಗೃಹ ಬಂಧನದ ಅವಧಿ ಮುಂದುವರಿಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.