
ಬೆಂಗಳೂರು, [ನ.12]: ಕೇಂದ್ರ ಸಚಿವ ಅನಂತ್ಕುಮಾರ್ ಇಂದು [ಸೋಮವಾರ] ವಿಧಿವಶರಾಗಿದ್ದಾರೆ. ಸಂಸದೀಯ ವ್ಯವಹಾರಗಳು ಹಾಗೂ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಕೇಂದ್ರ ಸಚಿವರಾಗಿದ್ದ ಅನಂತ್ ಕುಮಾರ್, ರಾಜಕೀಯವಾಗಿ ಬಿಜೆಪಿ ಪಕ್ಷವನ್ನು ಬೆಳಸಿದವರಲ್ಲಿ ಒಬ್ಬರು.
ಅಗಲಿದ ಕೇಂದ್ರ ಸಚಿವ ಅನಂತಕುಮಾರ್ ಸಂಕ್ಷಿಪ್ತ ಪರಿಚಯ
ಅಷ್ಟೇ ಅಲ್ಲದೇ ಕರ್ನಾಟಕಕ್ಕೂ ಕೇಂದ್ರ ಸರ್ಕಾರಕ್ಕೂ ಸಂಪರ್ಕ ಸೇತುವೆಯಾಗಿದ್ದರು. ಎಬಿವಿಪಿ ಕಾರ್ಯದರ್ಶಿಯಿಂದ ಹಿಡಿದು ಕೇಂದ್ರ ಸಚಿವರಾಗುವವರೆಗೆ ಅವರು ಹಲವು ಹುದ್ದೆಗಳನ್ನ ನಿರ್ವಹಿಸಿದ್ದರು. ಅವುಗಳ ಒಂದು ನೊಟ ಇಲ್ಲಿದೆ.
Live Updates: ಕೇಂದ್ರ ಸಚಿವ ಅನಂತ ಕುಮಾರ್ ಅಸ್ತಂಗತ
1982-85 : ಎಬಿವಿಪಿ ರಾಜ್ಯ ಘಟಕದ ಕಾರ್ಯದರ್ಶಿ
1985-87 : ಎಬಿವಿಪಿ ರಾಷ್ಟ್ರೀಯ ಕಾರ್ಯದರ್ಶಿ
1987-88 : ಬಿಜೆಪಿ ರಾಜ್ಯ ಘಟಕದ ಕಾರ್ಯದರ್ಶಿ
1988-95 : ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ
1995- 98 : ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ
1996 : ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಆಯ್ಕೆ
1996-97 : ಕೈಗಾರಿಕಾ ಸಲಹಾ ಸಮಿತಿ ಹಾಗೂ ರೈಲ್ವೆ ಸ್ಥಾಯಿ ಸಮಿತಿ ಸದಸ್ಯ
1998 : ಲೋಕಸಭೆಗೆ ಎರಡನೇ ಬಾರಿಗೆ ಪುನರಾಯ್ಕೆ
1998-1999 : ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವ
1999 : ಪ್ರವಾಸೋದ್ಯಮ ಇಲಾಖೆ ಹೆಚ್ಚುವರಿ ಹೊಣೆ
1999 : ಮೂರನೇ ಬಾರಿಗೆ ಸಂಸದರಾಗಿ ಆಯ್ಕೆ
1999-2000: ಕೇಂದ್ರ ಸಂಸ್ಕೃತಿ ಹಾಗೂ ಯುವ ಸಬಲೀಕರಣ ಸಚಿವ
2000 : ಸಂಸ್ಕೃತಿ ಇಲಾಖೆ ಜತೆಗೆ ಪ್ರವಾಸೋದ್ಯಮ
2000 : ನಗರಾಭಿವೃದ್ಧಿ, ಬಡತನ ನಿರ್ಮೂಲನೆ, ಗ್ರಾಮೀಣಾಭಿವೃದ್ಧಿ ಇಲಾಖೆ
2003 : ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕ
2004 : ಬೆಂಗಳೂರು ದಕ್ಷಿಣ ಕ್ಷೇತ್ರದಿಂದ 4ನೇ ಬಾರಿಗೆ ಆಯ್ಕೆ
2004-08 : ಸಂಸತ್ತಿನ ಉಕ್ಕು ಸಮಿತಿ ಅಧ್ಯಕ್ಷ
2004 : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ
2005 : ಲಾಭದಾಯಕ ಹುದ್ದೆಗೆ ಸಂಬಂಧಿಸಿದ ಸಂಸತ್ತಿನ ಜಂಟಿ ಸಮಿತಿ ಸದಸ್ಯ
2007 : ಸಂಸತ್ತಿನ ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ, ಕಲಾಪ ಸಲಹಾ ಸಮಿತಿ ಸದಸ್ಯ
2009 : ಐದನೇ ಬಾರಿಗೆ ಸಂಸದರಾಗಿ ಆಯ್ಕೆ
2009 : ರಸಗೊಬ್ಬರ ಹಾಗೂ ಔಷಧ ಸ್ಥಾಯಿ ಸಮಿತಿ ಅಧ್ಯಕ್ಷ
2009 : ಹಕ್ಕು ಭಾದ್ಯತೆ ಮತ್ತು ಕಾಯ್ದೆ ಸಮಿತಿ ಸದಸ್ಯ
2010 : ವಿದೇಶಾಂಗ ವ್ಯವಹಾರಗಳ ಸ್ಥಾಯಿ ಸಮಿತಿ ಅಧ್ಯಕ್ಷ
2014 : 6ನೇ ಬಾರಿಗೆ ಸಂಸದರಾಗಿ ಆಯ್ಕೆ, ಮೋದಿ ಸಂಪುಟದಲ್ಲಿ ರಸಗೊಬ್ಬರ ಹಾಗೂ ಔಷಧ ಇಲಾಖೆ ಸಚಿವ
2016 : ಕೇಂದ್ರ ಸಂಸದೀಯ ವ್ಯವಹಾರ ಇಲಾಖೆ ಹೆಚ್ಚುವರಿ ಹೊಣೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.