ರೋಗಿಗಳೇ ಹುಷಾರ್; ಖಾಸಗಿ ವೈದ್ಯರ ಮುಷ್ಕರಕ್ಕೆ ರೋಗಿಗಳ ಹಾಹಾಕಾರ

By Suvarna Web DeskFirst Published Nov 3, 2017, 12:38 PM IST
Highlights

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಾದ ಶಿವಮೊಗ್ಗ, ಬೆಳಗಾವಿ, ಮಂಡ್ಯ, ವಿಜಯಪುರ, ಬೀದರ್ ಹೀಗೆ ರಾಜ್ಯದ ಮೂಲೆಮೂಲೆಗಳಲ್ಲಿ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದು ಇದು ಬಿಸಿ ರೋಗಿಗಳಿಗೆ ತಟ್ಟುತ್ತಿದೆ.

ಬೆಂಗಳೂರು(ನ.03): ಇಂದು ರಾಜ್ಯದಾದ್ಯಂತ ಕರ್ನಾಟಕ ಪ್ರೈವೇಟ್ ಮೆಡಿಕಲ್ ಎಸ್ಟಾಬ್ಲಿಷ್‍ಮೆಂಟ್ ಕಾಯ್ದೆ ತಿದ್ದುಪಡಿ ಖಂಡಿಸಿ ವೈದ್ಯಕೀಯ ಸೇವೆಗಳ ಬಂದ್'ಗೆ ಖಾಸಗಿ ವೈದ್ಯರು ಕರೆ ನೀಡಿದ್ದು ರೋಗಗಳು ಪರದಾಡುವ ಪರಿಸ್ಥಿತಿ ಎದುರಾಗಿದೆ.

ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳಲ್ಲಿ ಒಂದಾಗಿರುವ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಹೊರರೋಗಿಗಳಿಗೆ ಚಿಕಿತ್ಸೆ ನೀಡಲು ನಿರಾಕರಿಸಲಾಗುತ್ತಿದೆ. ಅದೇ ರೀತಿ ಸೇಂಟ್ ಮಾರ್ಥಸ್, ಕಿಮ್ಸ್ ಹಾಗೂ ವಿಕ್ಟೋರಿಯಾ ಆಸ್ಪತ್ರೆಯ ಪರಿಸ್ಥಿತಿಯೂ ಇದಕ್ಕಿಂತ ಭಿನ್ನವಾಗಿಲ್ಲ.

Latest Videos

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಾದ ಶಿವಮೊಗ್ಗ, ಬೆಳಗಾವಿ, ಮಂಡ್ಯ, ವಿಜಯಪುರ, ಬೀದರ್ ಹೀಗೆ ರಾಜ್ಯದ ಮೂಲೆಮೂಲೆಗಳಲ್ಲಿ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದು ಇದು ಬಿಸಿ ರೋಗಿಗಳಿಗೆ ತಟ್ಟುತ್ತಿದೆ. ದಾವಣಗೆರೆ 450ಕ್ಕೂ ಹೆಚ್ಚು ನರ್ಸಿಂಗ್ ಹೋಂಗಳು ಸಂಪೂರ್ಣ ಬಂದ್ ಆಗಿವೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು ಮೂರು ಸಾವಿರಕ್ಕೂ ಅಧಿಕ ವೈದ್ಯರು ಪ್ರತಿಭಟನೆಗೆ ಹಾಜರಾಗಿದ್ದು, ರೋಗಿಗಳ ಪರದಾಟ ಹೇಳತೀರದಾಗಿದೆ.

click me!