
ಬೆಂಗಳೂರು(ಅ.24): ಇಂಧನ ಇಲಾಖೆ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ 'ಕಲ್ಲಿದ್ದಲು ತುರ್ತು ಪರಿಸ್ಥಿತಿ' ಘೋಷಿಸಿದ್ದಾರೆ. ಸಾಗಣೆ ಜಾಲದ ತೊಡಕಿನಿಂದ ರಾಜ್ಯದಲ್ಲಿ ಕಲ್ಲಿದ್ದಲು ದಾಸ್ತಾನು ಕರಗಿದ್ದು ಕೇವಲ ಅರ್ಧ ದಿನಕ್ಕಾಗುವಷ್ಟು ಮಾತ್ರ ಸಂಗ್ರಹವಿದೆ ಈ ಕಾರಣದಿಂದ ಯಾವುದೇ ವಿಧಾನದಲ್ಲಿ ಕಲ್ಲಿದ್ದಲು ಸಾಗಣೆಗೆ ಸರಕಾರ ಅವಕಾಶ ಕಲ್ಪಿಸಿದೆ.
ಸುದ್ದಿಗಾರರೊಂದಿ ಮಾತನಾಡಿದ ಇಂಧನ ಸಚಿವ ಡಿ.ಕೆ.ಶಿವಕುಮಾರ್, ಕಲ್ಲಿದ್ದಲು ದಾಸ್ತಾನು ಕೊರತೆಯಿಂದ ಪ್ರಸ್ತುತ ರಾಜ್ಯದ ವಿದ್ಯುತ್ ಪರಿಸ್ಥಿತಿ ಮೇಲೆ ಪರಿಣಾಮ ಆಗುವುದಿಲ್ಲ. ಮಳೆಗಾಲ ಮುಗಿದ ಬಳಿಕ ತೊಂದರೆ ಎದುರಾಗುವ ಸಾಧ್ಯತೆಯಿದೆ. ಈ ಕಾರಣದಿಂದಾಗಿ ಕಲ್ಲಿದ್ದಲು ಸಾಗಣೆಯನ್ನು ಯಾವುದೇ ವಿಧಾನದಲ್ಲಿ ನಿರ್ವಹಿಸಲು ಸಾಧ್ಯವಾಗುವಂತೆ ಪಾರದರ್ಶಕ ಕಾಯಿದೆಯಿಂದ (ಕೆಟಿಟಿಪಿ) ವಿನಾಯಿತಿ ಪಡೆಯಲು ಈ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ'ಎಂದು ತಿಳಿಸಿದ್ದಾರೆ.
'ಕೋಲ್ ಬ್ಲಾಕ್ ವಿವಾದ ಇತ್ಯರ್ಥವಾಗದ ಕಾರಣ ಹಾಗೂ ಸಾಗಣೆ ಲಿಂಕೇಜ್ ಸಮಸ್ಯೆಯಿಂದಾಗಿ ಈ ಪರಿಸ್ಥಿತಿ ಉದ್ಭವಿಸಿದೆ. ಈ ಬಗ್ಗೆ ಸಿಎಂ ಜೊತೆಗೂಡಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಬೇರೆ ಮಾರ್ಗದಲ್ಲಿ ಕಲ್ಲಿದ್ದಲು ಪೂರೈಸಲು ಒತ್ತಡ ಹೇರಿದ್ದೇವೆ. ರೈಲು ಮತ್ತು ರಸ್ತೆ ಎರಡೂ ಮಾರ್ಗಗಳಲ್ಲಿ ಕಲ್ಲಿದ್ದಲು ತರಿಸಿಕೊಳ್ಳಲು ಸಿದ್ಧತೆ ಮಾಡಿಕೊಳ್ಳಲಾಗಿದೆ' ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.