
ವಿಜಯಪುರ: 'ಜನರನ್ನು ಕೋಮು ಆಧಾರದ ಮೇಲೆ ವಿಭಜಿಸಿ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡಲು ಬಿಜೆಪಿ ಮತ್ತು ಆರ್‌ಎಸ್‌ಎಸ್ ಪ್ರಯತ್ನಿಸುತ್ತಿವೆ. ಕರಾವಳಿಯಲ್ಲಿ ನಡೆಯುತ್ತಿರುವ ಕೊಲೆ ಅಪರಾಧಗಳಿಗೆ ಇವುಗಳೇ ಕಾರಣ,' ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಆರೋಪಿಸಿದ್ದಾರೆ.
'ಅಪರಾಧಗಳು ಕೃತ್ಯಗಳಿಗೆ ಬಿಜೆಪಿ ಪ್ರಚೋದಿಸುತ್ತಿದೆ. ಆದರೆ, ರಾಜ್ಯದಲ್ಲಿ ಪಿಎಫ್ಐ ನಿಷೇಧಿಸುವ ಪ್ರಶ್ನೆಯೇ ಇಲ್ಲ. ಮೊದಲು ಬಿಜೆಪಿ ಕ್ರಿಮಿನಲ್ ರಾಜಕೀಯದಿಂದ ಹೊರ ಬರಲಿ,' ಎಂದಿದ್ದಾರೆ.
'ಕರ್ನಾಟಕದ ಜನತೆ ಜಾಣರಿದ್ದು, ಬಿಜೆಪಿ ಮತ್ತು ಆರ್‌ಎಸ್‌ಎಸ್ ಕೋಮು ವಿಭಜನೆಯ ತಂತ್ರವನ್ನು ಬಲ್ಲವರಾಗಿದ್ದಾರೆ. ಚುನಾವಣೆಯಲ್ಲಿ ಕನ್ನಡಿಗರು ಇಂಥವರಿಗೆ ಅವಕಾಶ ನೀಡುವುದಿಲ್ಲ. ಆರ್‌ಎಸ್‌ಎಸ್ ಅಷ್ಟೇ ಅಲ್ಲ, ಹಿಂದೂ ಮೂಲಭೂತವಾದಿಗಳಾಗಲಿ ಬೇರೆ ಯಾರೇ ಕೋಮವಾದಿಗಳಾದದರೂ ಅವರ ವಿರುದ್ಧ ಸರಕಾರ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಿದೆ,' ಎಂದರು.
ಕಾಂಗ್ರೆಸ್ ಗೆಲವು ನಿಶ್ಚಿತ:
ರಾಜ್ಯದಲ್ಲಿ ಬಿಜೆಪಿ ಜನರಲ್ಲಿ ಕೋಮುಭಾವನೆ ಕೆರಳಿಸಿ, ಅಧಿಕಾರಕ್ಕೆ ಬರಲು ಹವಣಿಸುತ್ತಿದೆ, ರಾಜ್ಯದ ಜನತೆಗೆ ಬರುವ ಚುನಾವಣೆಯಲ್ಲಿ ಜನರೇ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ,
'ರಾಜ್ಯ ಮತ್ತು ಜಿಲ್ಲಾ ಕಾಂಗ್ರೆಸ್ಸಿನಲ್ಲಿ ಯಾವುದೇ ಭಿನ್ನಮತವಿಲ್ಲ. ಕಳೆದ ಬಾರಿಗಿಂತ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗಳಿಸಲಿದೆ,' ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.