ಪಟ್ಟು ಹಿಡಿದು ಸಿಎಂರಿಂದ ಪ್ರಶಸ್ತಿ ಪಡೆದರು!

Published : Jun 22, 2017, 09:41 AM ISTUpdated : Apr 11, 2018, 12:35 PM IST
ಪಟ್ಟು ಹಿಡಿದು ಸಿಎಂರಿಂದ ಪ್ರಶಸ್ತಿ ಪಡೆದರು!

ಸಾರಾಂಶ

ಕೃಷಿ ಇಲಾಖೆ ನೀಡುವ ಶ್ರೇಷ್ಠ ಕೃಷಿಕ ಮತ್ತು ಕೃಷಿ ಪಂಡಿತ ಪ್ರಶಸ್ತಿಯನ್ನು ಮುಖ್ಯಮಂತ್ರಿಗಳೇ ಪ್ರದಾನ ಮಾಡಬೇಕೆಂದು ಪ್ರಶಸ್ತಿ ಪುರಸ್ಕೃತರು ಪಟ್ಟು ಹಿಡಿದು ಗಂಟೆಗಟ್ಟಲೇ ಕಾದು ಸಿದ್ದರಾಮಯ್ಯ ಅವರಿಂದ ಪ್ರಶಸ್ತಿ ಸ್ವೀಕರಿಸಿದ ಘಟನೆ ನಡೆಯಿತು.

ಬೆಂಗಳೂರು(ಜೂ.22): ಕೃಷಿ ಇಲಾಖೆ ನೀಡುವ ಶ್ರೇಷ್ಠ ಕೃಷಿಕ ಮತ್ತು ಕೃಷಿ ಪಂಡಿತ ಪ್ರಶಸ್ತಿಯನ್ನು ಮುಖ್ಯಮಂತ್ರಿಗಳೇ ಪ್ರದಾನ ಮಾಡಬೇಕೆಂದು ಪ್ರಶಸ್ತಿ ಪುರಸ್ಕೃತರು ಪಟ್ಟು ಹಿಡಿದು ಗಂಟೆಗಟ್ಟಲೇ ಕಾದು ಸಿದ್ದರಾಮಯ್ಯ ಅವರಿಂದ ಪ್ರಶಸ್ತಿ ಸ್ವೀಕರಿಸಿದ ಘಟನೆ ನಡೆಯಿತು.

ಕಳೆದ 3 ವರ್ಷಗಳಿಂದ ನಾನಾ ಕಾರಣ ಗಳಿಂದ ಈ ಪ್ರಶಸ್ತಿಯನ್ನು ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ವಿಧಾನಸೌಧದ ಬ್ಯಾಂಕ್ವೆಂಟ್‌ ಹಾಲ್‌ನಲ್ಲಿ ಬುಧವಾರ 12ಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು. ಆದರೆ, ವಿಧಾನಸಭೆಯಲ್ಲಿ ಉತ್ತರ ನೀಡಬೇಕಿದ್ದ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾರಂಭಕ್ಕೆ ಗೈರಾಗಿದ್ದರು. ಕೃಷಿ ಸಚಿವ ಕೃಷ್ಣಭೈರೇಗೌಡ ಅವರು ಪ್ರಶಸ್ತಿ ಪ್ರದಾನ ಮಾಡಲು ಮುಂದಾದರು. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ರೈತರು, ನಾವು ದೂರದ ಊರುಗಳಿಂದ ಪ್ರಶಸ್ತಿ ಸ್ವೀಕರಿಸಲು ಆಗಮಿಸಿದ್ದೇವೆ. ಮುಖ್ಯಮಂತ್ರಿಗಳೇ ನಮಗೆ ಪ್ರಶಸ್ತಿ ನೀಡಬೇಕು ಎಂದು ಪಟ್ಟು ಹಿಡಿದರು. ಸಚಿವ ಕೃಷ್ಣಭೈರೇಗೌಡ ಅವರು ರೈತರ ಮನವೊಲಿಸಲು ಪ್ರಯತ್ನಪಟ್ಟರಾದರೂ ತಮ್ಮ ಪಟ್ಟು ಸಡಿಲಗೊಳಿಸಲಿಲ್ಲ.

ಸದನದಲ್ಲಿ ಬಜೆಟ್‌ಗೆ ಅನುಮೋದನೆ ಪಡೆಯಲು ಸದಸ್ಯರಿಗೆ ಉತ್ತರ ನೀಡುತ್ತಿದ್ದಾರೆ. ಉತ್ತರ ನೀಡಿದ ನಂತರ ಮುಖ್ಯಮಂತ್ರಿಗಳು ವೇದಿಕೆಗೆ ಆಗಮಿಸಲಿದ್ದಾರೆ ಎಂಬ ಸಚಿವರು ಮನವರಿಕೆಯ ಮಾತಿಗೂ ರೈತರು ಸೊಪ್ಪು ಹಾಕಲಿಲ್ಲ. ಮುಖ್ಯಮಂತ್ರಿಗಳು ಆಗಮಿಸುವವರೆಗೆ ಪ್ರಶಸ್ತಿ ಸ್ವೀಕರಿಸದ ರೈತರು ಸಭಾಂಗಣದಲ್ಲಿಯೇ ಕಾದು ಕುಳಿತರು. ಮಧ್ಯಾಹ್ನ ಊಟದ ವಿರಾಮದ ವೇಳೆ ಸಮಾರಂಭಕ್ಕೆ ಆಗಮಿಸಿದ ಮುಖ್ಯಮಂತ್ರಿ ರೈತರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಆಗಮಿಸುತ್ತಿದ್ದಂತೆ ರೈತರು ಜೈಕಾರ ಕೂಗಿದರು. ಅಲ್ಲದೇ, ಅವರ ಜತೆ ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದರು.

ಈಗ ಯಡಿಯೂರಪ್ಪ ಮೂಗು ಹಿಡಿಯಿರಿ: ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದ ಸಹಕಾರಿ ಸಂಘಗಳಿಂದ ರೈತರು ಮಾಡಿದ ಸಾಲವನ್ನು ಮನ್ನಾ ಮಾಡಲಾಗಿದೆ. ರಾಷ್ಟ್ರೀಕೃತ ವಾಣಿಜ್ಯ ಬ್ಯಾಂಕುಗಳಲ್ಲಿ ರೈತರು ಮಾಡಿರುವ ಸಾಲವನ್ನು ಕೇಂದ್ರ ಸರ್ಕಾರ ಮನ್ನಾ ಮಾಡಬೇಕು. ಈಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌, ಪ್ರಧಾನಿ ನರೇಂದ್ರ ಮೋದಿ, ಹಣಕಾಸು ಸಚಿವ ಅರುಣ್‌ ಜೇಟ್ಲಿ ಮತ್ತು ಆರ್‌ಬಿಐ ಗವರ್ನರ್‌ ಅವರ ಮೂಗು ಹಿಡಿಯಬೇಕು ಎಂದರು.

ರೈತರ ಸಾಲಮನ್ನಾಕ್ಕೆ ಕೇಂದ್ರ ಬಿಡಿಗಾಸು ಸಾಲ ಮನ್ನಾ ಮಾಡುವುದಿಲ್ಲ ಎಂದು ಹೇಳಿದ್ದರಿಂದ ತಾನು ಸಾಲ ಮನ್ನಾ ಮಾಡಿದ್ದೇನೆ. ಬಿಜೆಪಿಯವರು ಕೇಂದ್ರದಿಂದ ಸಾಲಮನ್ನಾ ಮಾಡಿಸಬೇಕು ಎಂದರು. 2014 ಮತ್ತು 2015ನೇ ಸಾಲಿನ ಕೃಷಿ ಪಂಡಿತ, ಕೃಷಿ ಮತ್ತು ಶ್ರೇಷ್ಠ ಕೃಷಿಕ ಪ್ರಶಸ್ತಿಯನ್ನು 111 ರೈತರಿಗೆ ಪ್ರದಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಕೃಷಿ ಸಚಿವ ಕೃಷ್ಣಭೈರೇಗೌಡ, ಪಶುಸಂಗೋಪನೆ ಸಚಿವ ಎ.ಮಂಜು ಸೇರಿದಂತೆ ಇತರರು ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಿತ್ತೂರು ಕರ್ನಾಟಕಕ್ಕೆ 5 ಸಾವಿರ ಕೋಟಿ ನೀಡಿ, ಇಲ್ಲವೇ ಪ್ರತ್ಯೇಕ ರಾಜ್ಯ ಕೊಡಿ: ಶಾಸಕ ರಾಜು ಕಾಗೆ
ಪುರುಷರಿಗೆ ಮಾತ್ರವಲ್ಲ ಮೊಬೈಲ್‌ ಸೇಫ್ಟಿಗೆ ಬಂದಿದೆ ಕಾಂಡೋಮ್‌, ಏನಿದು USB ಕಾಂಡೋಮ್‌?