
ನವದೆಹಲಿ : ಈಗಾಗಲೇ ಇಂಜಿನ್ ಸಮಸ್ಯೆಯಿಂದ ಅನೇಕ ಇಂಡಿಗೋ ವಿಮಾನಗಳ ಹಾರಾಟವನ್ನು ನಿಲ್ಲಿಸಲಾಗಿದ್ದು, ಇದೀಗ ಮತ್ತೊಂದು ಇಂಡಿಗೋ ವಿಮಾನವನ್ನು ತುರ್ತು ಭೂ ಸ್ಪರ್ಶ ಮಾಡಲಾಗಿದೆ. ಜಮ್ಮು ವಿಮಾನ ನಿಲ್ದಾಣದಲ್ಲಿ ಭಾನುವಾರ ಇಂಧನ ಲೀಕೇಜ್ ಸಮಸ್ಯೆಗೆ ಒಳಗಾಗಿದ್ದ ವಿಮಾನವನ್ನು ತುರ್ತು ಭೂ ಸ್ಪರ್ಶ ಮಾಡಲಾಗಿದೆ.
ಇದರಿಂದ ಕಳೆದ 24 ಗಂಟೆಗಳಲ್ಲಿ ಮೂರು ವಿಮಾನಗಳ ತುರ್ತು ಭೂಸ್ಪರ್ಶ ಮಾಡಿದಂತಾಗಿದೆ. ಶನಿವಾರವೂ ಕೂಡ 2 ಇಂಡಿಗೋ ವಿಮಾನಗಳಲ್ಲಿ ಸಮಸ್ಯೆ ಕಂಡು ಬಂದ ಹಿನ್ನೆಲೆಯಲ್ಲಿ ಪೈಲಟ್’ಗಳು ಪತ್ತೆ ಮಾಡಿ ತುರ್ತು ಭೂ ಸ್ಪರ್ಶ ಮಾಡಿದ್ದರು.
ಬೆಂಗಳೂರಿನಿಂದ ದಿಲ್ಲಿಗೆ ತೆರಳುತ್ತಿದ್ದ ವಿಮಾನದಲ್ಲಿ ಇಂಜಿನ್ ಸಮಸ್ಯೆ ಕಂಡು ಬಂದ ಹಿನ್ನೆಲೆಯಲ್ಲಿ ಭೂಸ್ಪರ್ಶ ಮಾಡಲಾಗಿತ್ತು. ಅದಾದ ಬಳಿಕ ಇದೀಗ ಮತ್ತೆ ಅಂತಹದ್ದೇ ಘಟನೆ ಬೆಳಕಿಗೆ ಬಂದಿದ್ದು, ಆತಂಕಕ್ಕೆ ಎಡೆ ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.