
ಗಾಂಧೀನಗರ[ಸೆ.17]: ಯಾರಾದರೂ ಹೂಸು (ಅಪಾನವಾಯು) ಬಿಟ್ಟರೆ ಕೂಡಲೇ ಮೂಗು ಮುಚ್ಚಿಕೊಳ್ಳುತ್ತೇವೆ. ಅಂಥದ್ದರಲ್ಲಿ ಹೂಸು ಬಿಡುವ ಸ್ಪರ್ಧೆ ಏರ್ಪಡಿಸಿದರೆ ಕತೆ ಏನಾಗಬೇಡ?
ಹೌದು, ಗುಜರಾತಿನ ಸೂರತ್‌ನಲ್ಲಿ ಸೆ.22ರಂದು ಹೂಸು ಬಿಡುವ ಸ್ಪರ್ಧೆ ಏರ್ಪಡಿಸಲಾಗಿದೆ. ಈ ಸ್ಪರ್ಧೆಯಲ್ಲಿ ಗೆದ್ದವರಿಗೆ ಆಕರ್ಷಕ ಬಹುಮಾನವನ್ನೂ ನೀಡಲಾಗುತ್ತದೆ. ಅತಿ ಹೆಚ್ಚು ಹೊತ್ತು, ದೊಡ್ಡದಾಗಿ ಮತ್ತು ರಾಗಬದ್ಧವಾಗಿ ಹೂಸು ಬಿಡುವ ವಿಭಾಗದಲ್ಲಿ ವಿಜೇತರಾದವರಿಗೆ ಟ್ರೋಫಿಯನ್ನು ನೀಡಲಾಗುತ್ತದೆ.
ಪ್ರತಿಯೊಬ್ಬರಿಗೂ ತೀರ್ಪುಗಾರರ ಮುಂದೆ ತಮ್ಮ ಪ್ರತಿಭೆ ತೋರಿಸಲು 60 ಸೆಕೆಂಡ್‌ಗಳ ಕಾಲಾವಕಾಶ ನೀಡಲಾಗುತ್ತದೆ. ವಿದೇಶಗಳಲ್ಲಿ ಈ ರೀತಿಯ ಸ್ಪರ್ಧೆಗಳು ಸಾಮಾನ್ಯ. ಆದರೆ, ಭಾರತದಲ್ಲಿ ನಡೆಯುತ್ತಿರುವುದು ಇದೇ ಮೊದಲು. ಈ ಸ್ಪರ್ಧೆಗೆ ಈಗಾಗಲೇ 200 ಮಂದಿ ಸ್ಪರ್ಧಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರಂತೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.