
ಮೈಸೂರು : ಚುನಾವಣೆಯಲ್ಲಿ 25 ಸೀಟುಗಳನ್ನೂ ಗೆಲ್ಲದ ಜೆಡಿಎಸ್‌ನವರು ಹಾಗೂ ಬುರುಡೆ ಬಿಡುತ್ತಾ ತಿರುಗುತ್ತಿರುವ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಜತೆಗೆ ಇದೇ ನನ್ನ ಕೊನೇ ಚುನಾವಣೆ ಎಂದು ಪುನರುಚ್ಛರಿಸಿದ ಅವರು, ರಾಜಕಾರಣದಲ್ಲಿ ಮುಂದುವರಿಯುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ವರುಣ ಕ್ಷೇತ್ರದ ಮೆಲ್ಲಹಳ್ಳಿ, ಹುನಗನಹಳ್ಳಿ, ಮಾದೇಗೌಡನಹುಂಡಿ, ರಂಗಸಮುದ್ರ, ಹಿಟ್ಟುವಳ್ಳಿ, ತುಂಬಲ, ಕುಪ್ಯಾ, ಯಡದೊರೆ, ಗರ್ಗೇಶ್ವರಿಗಳಲ್ಲಿ ರೋಡ್‌ಶೋ ಹಾಗೂ ಪಾದಯಾತ್ರೆ ನಡೆಸಿ ಮಾತನಾಡಿದ ಅವರು, ನನ್ನ, ಮೆಲ್ಲಹಳ್ಳಿಯ ಸಂಬಂಧ 40 ವರ್ಷಗಳಷ್ಟುಹಳೆಯದರು. ಎಲ್ಲಿಂದಲೋ ಬಂದವರು ಚುನಾವಣೆ ಮುಗಿದ ನಂತರ ನಾಪತ್ತೆಯಾಗುತ್ತಾರೆ. ಸುಳ್ಳು ಹೇಳಿ, ಬುರುಡೆ ಹೊಡೆದು ಹೋಗುತ್ತಾರೆ ಅಂತಹವರ ಬಗ್ಗೆ ಎಚ್ಚರದಿಂದಿರಿ ಎಂದರು.
ಸಂಬಂಧ ಶಾಶ್ವತವಾದದ್ದು: ಈ ಚುನಾವಣೆಯ ನಂತರ ಎಂದೂ ಚುನಾವಣೆಗೆ ನಿಲ್ಲುವುದಿಲ್ಲ. ಆದರೆ ರಾಜಕೀಯದಲ್ಲಿರುತ್ತೇನೆ. ನಮ್ಮ ನಿಮ್ಮ ಸಂಬಂಧ ಶಾಶ್ವತವಾದುದು. ನನ್ನನ್ನು 30,000 ಮತಗಳ ಅಂತರದಿಂದ ಗೆಲ್ಲಿಸಿದ್ದೀರಿ. ಅದಕ್ಕಿಂತತೂ ಹೆಚ್ಚಿನ ಅಂತರದಿಂದ ಡಾ.ಯತೀಂದ್ರರವರನ್ನು ಗೆಲ್ಲಿಸಿ ವಿಧಾನಸಭೆಗೆ ಕಳುಹಿಸಿಕೊಡಿ. ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು, ನಾನೇ ಮುಖ್ಯಮಂತ್ರಿ ಆಗುವ ಅವಕಾಶವಿದೆ ಎಂದರು.
ನಾಮಪತ್ರ ಸಲ್ಲಿಕೆ ಬಳಿಕ ರಾಜ್ಯ ಪ್ರವಾಸ: ಇದಕ್ಕೂ ಮೊದಲು ಮೈಸೂರು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಗಿದ ನಂತರ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಈವರೆಗೆ ಯಾವ ಕ್ಷೇತ್ರಕ್ಕೂ ಪ್ರಚಾರಕ್ಕೆ ಹೋಗಿಲ್ಲವೋ ಅಲ್ಲಿಗೆ ಹೋಗುತ್ತೇನೆ. ಅದೇ ರೀತಿ ಯಾವ ಕ್ಷೇತ್ರದಲ್ಲಿ ಕಠಿಣ ಸ್ಪರ್ಧೆ ಇದೆಯೋ ಅಲ್ಲಿ ಪ್ರಚಾರ ನಡೆಸುತ್ತೇನೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ