
ಬೆಂಗಳೂರು (ಜು.27): ಇಂದು ವಿಧಿವಶರಾದ ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ನಿನ್ನೆ ಕೊನೆಯ ಬಾರಿಗೆ ಶಿಕ್ಷಣ ಸಚಿವ ತನ್ವೀರ್ ಸೇಠ್’ಗೆ ಕರೆ ಮಾಡಿ ಮಾತನಾಡಿದ್ದಾರೆ.
ನಿನ್ನೆ ತನ್ವೀರ್ ಸೇಠ್’ಗೆ ಕರೆ ಮಾಡಿ, ಜವರ್ಗಿ ಕ್ಷೇತ್ರದಲ್ಲಿ ಗಂಗಾ ಕಲ್ಯಾಣ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಬಗ್ಗೆ ಮಾತನಾಡಿದ್ದಾರೆ. ಅದೇ ರೀತಿ 2 ದಿನಗಳ ಹಿಂದೆ ತನ್ವೀರ್ ಸೇಠ್;ರನ್ನು ಕರೆಸಿಕೊಂಡು ಅಕ್ಷರ ದಾಸೋಹ ಯೋಜನೆಗೆ ಶಿಕ್ಷಣಾಧಿಕಾರಿಗಳನ್ನು ವರ್ಗಾವಣೆ ಮಾಡುವ ಬಗ್ಗೆಯೂ ಮಾತನಾಡಿದ್ದಾರೆ.
ಶಿಕ್ಷಣಾಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಧರಂ ಸಿಂಗ್ ಪುತ್ರ ಅಜಯ್ ಸಿಂಗ್ ತನ್ವೀರ್ ಸೇಠ್’ಗೆ ಮನವಿ ಮಾಡಿದ್ದರು. ಹೀಗೆ ಮಾಡುವುದರಿಂದ ಸರ್ಕಾರಿ ಶಾಲೆಯ ಮಕ್ಕಳಿಗೆ ತೊಂದರೆಯಾಗುತ್ತದೆ. ಇದನ್ನು ನಿಲ್ಲಿಸಿ ಎಂದು ತನ್ವೀರ್ ಸೇಠ್;ಗೆ ಕೇಳಿಕೊಂಡಿದ್ದರು. ಅನಾರೋಗ್ಯದಿಂದ ರಾಜಕೀಯದಿಂದ ದೂರ ಉಳಿದಿದ್ದರೂ ಶೈಕ್ಷಣಿಕ ಅಭಿವೃದ್ಧಿಯತ್ತ ಬದ್ಧತೆಯನ್ನು ಹೊಂದಿದ್ದ ರಾಜಕಾರಣಿಯಾಗಿದ್ದರು ಧರಂ ಸಿಂಗ್. ಜೊತೆಗೆ ಅಭಿವೃದ್ಧಿ ಯೋಜನೆಗಳ ಬಗ್ಗೆ ಸಚಿವರ ಜೊತೆ, ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಮಾಹಿತಿ ಪಡೆದುಕೊಳ್ಳುತ್ತಿದ್ದರು.
ಶಿಕ್ಷಣದ ಜೊತೆಗೆ ನೀರಾವರಿಯನ್ನು ಅಭಿವೃದ್ಧಿಪಡಿಸುವುದು ಇವರ ಮುಖ್ಯ ಯೋಚನೆಯಾಗಿತ್ತು. ಸಿಎಂ ಆಗಿದ್ದಾಗಲೂ ಜನಾಭಿವೃದ್ಧಿ ಯೋಜನೆ ಪರ ಇದ್ದರು. ತಮ್ಮ ಸಹೋದ್ಯೋಗಿಗಳ ಕೆಲಸದಲ್ಲಿ ಮೂಗು ತೂರಿಸುತ್ತಿರಲಿಲ್ಲ. ಜೆಡಿಎಸ್-ಕಾಂಗ್ರೆಸ್ ಮೈತ್ರಿಯನ್ನು ಬಲಗೊಳಿಸಿದ್ದರು ಎಂದು ತನ್ವೀರ್ ಸೇಠ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.