
ನವದೆಹಲಿ(ಆ.16): ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಇಂದು ವಿಧಿವಶರಾಗಿದ್ದಾರೆ. ಧೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವಾಜಪೇಯಿ ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ತಮ್ಮ ವಿದ್ಯಾರ್ಥಿ ದೆಸೆಯಲ್ಲೇ ಆರ್ ಎಸ್ ಎಸ್ ಸಿದ್ಧಾಂತಕ್ಕೆ ಮಾರು ಹೋಗಿದ್ದ ಅಟಲ್, ಜನಸಂಘದ ಸ್ಥಾಪನೆ, ಬಿಜೆಪಿ ಉದಯದ ನಂತರವೂ ಆರ್‌ಎಸ್‌ಎಸ್ ಜೊತೆ ಒಡನಾಟ ಹೊಂದಿದ್ದರು.
ಕೆಲ ವರ್ಷಗಳ ಹಿಂದೆ ಜನಪ್ರಿಯ ಕಾರ್ಯಕ್ರಮ ‘ಆಪ್ ಕೀ ಅದಾಲತ್’ ನಲ್ಲಿ ಭಾಗವಹಿಸಿದ್ದ ಅಟಲ್, ಆರ್‌ಎಸ್‌ಎಸ್ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆರ್‌ಎಸ್‌ಎಸ್ ಬಿಜೆಪಿಯನ್ನು ಕಂಟ್ರೋಲ್ ಮಾಡುತ್ತಿದೆ ಎಂಬ ಪ್ರಶ್ನೆಗೆ ತಾಳ್ಮೆಯಿಂದಲೇ ಉತ್ತರಿಸಿದ್ದ ವಾಜಪೇಯಿ, ಇದು ಕೇವಲ ಊಹಾಪೋಹ ಎಂದು ಸ್ಪಷ್ಟವಾಗಿ ತಳ್ಳಿ ಹಾಕಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.