
ನವದೆಹಲಿ (ಫೆ.01): ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಮಂಡನೆ ಮಾಡಿರುವ ಪ್ರಸಕ್ತ ಸಾಲಿನ ಕೇಂದ್ರ ಬಜೆಟ್'ನಲ್ಲಿ ಆರೋಗ್ಯ ವಲಯಕ್ಕೆ ಏನೇನು ಸಿಕ್ಕಿದೆ ಎಂದು ನೋಡುವುದಾದರೆ. ಜಾರ್ಖಂಡ್ ಮತ್ತು ಗುಜರಾತ್'ನಲ್ಲಿ 2 ಏಮ್ಸ್ ಸ್ಥಾಪನೆ ಮಾಡುವುದಾಗಿ ಹೇಳಿದ್ದಾರೆ.
ದೇಶದಲ್ಲಿರುವ 1.5 ಲಕ್ಷ ಆರೋಗ್ಯ ಕೇಂದ್ರಗಳನ್ನು ಆರೋಗ್ಯ ಸುಧಾರಣಾ ಕೇಂದ್ರಗಳನ್ನಾಗಿ ಪರಿವರ್ತಿಸಲಾಗುವುದು. ಪರಿಣತ ವೈದ್ಯರ ಸಂಖ್ಯೆಯನ್ನು ಹೆಚ್ಚಿಸುವ ಸಲುವಾಗಿ ವೈದ್ಯಕೀಯ ಸ್ನಾತಕೋತ್ತರ ಪದವಿಗಳಲ್ಲಿ ಪ್ರತಿ ವರ್ಷಕ್ಕೆ 5000 ಹೆಚ್ಚು ಸೀಟುಗಳನ್ನು ಸೇರ್ಪಡೆ ಮಾಡಲು ನಿರ್ಧರಿಸಲಾಗಿದೆ.
ಜನರಿಗೆ ರಿಯಾಯಿತಿ ದರದಲ್ಲಿ ಔಷಧಿ ಕೈಗೆಟುಕುವಂತೆ ಮಾಡಲು ಔಷಧಿ ಮತ್ತು ಪ್ರಸಾದನ ಕಾಯ್ದೆಯಡಿಯಲ್ಲಿ ಬದಲಾವಣೆಗೆ ಪ್ರಸ್ತಾಪ. ವೈದ್ಯಕೀಯ ಉಪಕರಣಗಳಿಗೆ ಸಂಬಂಧಪಟ್ಟಂತೆ ಹೊಸ ಕಾಯ್ದೆಗಳನ್ನು ರೂಪಿಸಲಾಗುವುದು ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.