
ಕೇರಳ (ಆ.20): ಉದ್ಯೋಗಸ್ಥ ಮಹಿಳೆಯರಿಗೆ ಮುಟ್ಟಿನ ರಜೆ ನೀಡಬೇಕು ಎನ್ನುವ ವಾದ ಆಗಾಗ ಕೇಳಿ ಬರುತ್ತದೆ. ಪರ-ವಿರೋಧ ಚರ್ಚೆಗಳು ನಡೆಯುತ್ತಿದೆ. ಇದಕ್ಕೆ ಪೂರಕ ಎಂಬಂತೆ ಕೇರಳದ ಈ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಕಳೆದ ಶತಮಾನಗಳಿಂದಲೂ ಮೂರು ದಿನ 'ಮುಟ್ಟಿನ ರಜೆ' ನೀಡುವ ಪರಿಪಾಠವನ್ನು ಹೊಂದಿದೆ.
ಇಲ್ಲಿನ ತ್ರಿಪುನಿತುರಾ ಮಹಿಳಾ ಸರ್ಕಾರಿ ಶಾಲೆಯಲ್ಲಿ 1912 ವಿದ್ಯಾರ್ಥಿನಿಯರು ಕಲಿಯುತ್ತಿದ್ದು, ಪ್ರತಿತಿಂಗಳು ಮುಟ್ಟಿನ ರಜೆ ತೆಗೆದುಕೊಳ್ಳಲು ಅವಕಾಶ ನೀಡಿದ್ದಾರೆ. ಒಂದು ವೇಳೆ ವಾರ್ಷಿಕ ಪರೀಕ್ಷೆ ಸಮಯದಲ್ಲಿ ಮುಟ್ಟಾದರೆ ಆ ನಂತರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ.
ಶೈಕ್ಷಣಿಕ ಕಾನೂನಿನ ಪ್ರಕಾರ, ವಾರ್ಷಿಕ ಪರೀಕ್ಷೆಗೆ ಕುಳಿತುಕೊಳ್ಳಲು 300 ದಿನಗಳ ಹಾಜರಾತಿ ಅತ್ಯಗತ್ಯ. ನಿಯಮಿತವಾಗಿ ಟೆಸ್ಟ್’ಗಳನ್ನು ಮಾಡಲಾಗುತ್ತದೆ. ಅದಕ್ಕೆ ವಿದ್ಯಾರ್ಥಿಗಳು ಹಾಜರಾಗುವುದು ಕಡ್ಡಾಯ. ಮುಟ್ಟಿನ ಸಮಯದಲ್ಲಿ ವಿದ್ಯಾರ್ಥಿಗಳು, ಶಿಕ್ಷಕಿಯರು ಶಾಲೆಗೆ ಬರದಿದ್ದಾಗ ಸಮಸ್ಯೆಯಾಗುತ್ತದೆ ಎಂದು ಶೈಕ್ಷಣಿಕ ಅಧಿಕಾರಿಗಳು ಹೇಳಿದ್ದಾರೆ.
ಶತಮಾನಗಳಿಂದಲೂ ಈ ಶಾಲೆಯಲ್ಲಿ ಮುಟ್ಟಿನ ರಜೆ ನೀಡುವ ಪರಿಪಾಠ ಬೆಳೆದುಕೊಂಡು ಬಂದಿದೆ. ಈ ವಿಚಾರ ಕೇರಳ ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ್ದು, ಮಹಿಳಾ ಉದ್ಯೋಗಿಗಳಿಗೂ ಈ ಸಮಯದಲ್ಲಿ ರಜೆ ನೀಡಬೇಕೆಂದು ಶಾಸಕರೊಬ್ಬರು ಒತ್ತಾಯಿಸಿದ್ದರು. ಇದಕ್ಕೆ ಮುಖ್ಯಮಂತ್ರಿ ಪಿನರಾಯಿ ವಿಜಯನ್, ಸರ್ಕಾರ ಇದರ ಬಗ್ಗೆ ಚಿಂತನೆ ನಡೆಸಿ ನಿಲುವನ್ನು ತೆಗೆದುಕೊಳ್ಳುತ್ತದೆ ಎಂದು ಭರವಸೆ ನೀಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.