
ಟೋಕಿಯೋ(ಅ.13): ದ್ವೀಪರಾಷ್ಟ್ರ ಜಪಾನ್‌ಗೆ ಪ್ರಬಲ ಹಗಿಬಿಸ್ ಚಂಡಮಾರುತ ಅಪ್ಪಳಿಸಿದ್ದು, ಜಪಾನ್‌ನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. ಪರಿಣಾಮ 11 ಜನರು ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ.
ಜಪಾನ್ ರಾಜಧಾನಿ ಟೋಕಿಯೋ ಸೇರಿದಂತೆ ವಿವಿಧೆಡೆ ವಾಸವಿರುವ 42 ಲಕ್ಷಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲು ಸ್ಥಳೀಯ ಆಡಳಿತ ಮುಂದಾಗಿದೆ.
ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಿರುವ ಹವಾಮಾನ ಇಲಾಖೆ, ಕೂಡಲೇ ನಗರವನ್ನು ತೊರೆಯುವಂತೆ ಜನರಿಗೆ ಸೂಚನೆ ನೀಡಲಾಗಿದೆ.
ಚೀಬಾ ಪರ್ಫೆಕ್ಚರ್‌ನ ಇಚಿಹರಾ ಪ್ರದೇಶದಲ್ಲಿ ಬಿರುಗಾಳಿ ಬೀಸುತ್ತಿದ್ದು, ಸುಮಾರು 7 ಲಕ್ಷಕ್ಕೂ ಹೆಚ್ಚು ಜನರು ವಿದ್ಯುತ್ ಸಮಸ್ಯೆ ಎದುರಿಸುತ್ತಿದ್ದಾರೆ.
ಹಗಿಬಿಸ್ ಚಂಡಮಾರುತದ ಪರಿಣಾಮವಾಗಿ ಇದುವರೆಗೂ 11 ಜನರು ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.