
ರಾಯ್ಪುರ(ಸೆ.24): ಛತ್ತೀಸ್‌ಗಡದಲ್ಲಿ ಶನಿವಾರ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಮೂವರು ನಕ್ಸಲೀಯರನ್ನು ಹತ್ಯೆ ಮಾಡಲಾಗಿದೆ.
ಮೊದಲ ಪ್ರಕರಣದಲ್ಲಿ ಬಸ್ತಾರ್ ವಲಯದ ಸಾಂಗ್ಯುವೆಲ್ ಅರಣ್ಯ ಪ್ರದೇಶದಲ್ಲಿ ವಿಶೇಷ ಕಾರ್ಯಾಚರಣೆ ಪಡೆ ಹಾಗೂ ನಕ್ಸಲೀಯರ ನಡುವಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಮಹಿಳಾ ನಕ್ಸಲೀಯರನ್ನು ಗುಂಡಿಟ್ಟು ಸಾಯಿಸಲಾಗಿದೆ.
ಬಿಜಾಪುರ ಜಿಲ್ಲೆಯ ಗಡಿ ಪ್ರದೇಶವಾಗಿರುವ ರಂಗೇಯ ಎಂಬಲ್ಲಿ ನಡೆದ ಮತ್ತೊಂದು ಕಾಳಗದಲ್ಲಿ ಮತ್ತೊಬ್ಬ ನಕ್ಸಲೀಯನನ್ನು ಗುಂಡಿಟ್ಟು ಸಾಯಿಸಲಾಗಿದೆ. ಎರಡೂ ಸ್ಥಳಗಳಿಂದ 12 ರೈಫಲ್‌ಗಳು ಹಾಗೂ ಸ್ಫೋಟಕಗಳು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.