
ಚಿಕ್ಕಮಗಳೂರು[ಏ.19]: ತವೇರಾ ಹಾಗೂ ಕಾರ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ಶಿವಪುರ ಢಾಬಾ ಸಮೀಪ ನಡೆದಿದೆ
ಗುರುವಾರ ರಾತ್ರಿ ಚಿಕ್ಕಮಗಳೂರಿನಲ್ಲಿ ನಡೆದ ಈ ಅಪಘಾತದಲ್ಲಿ ಮೃತಪಟ್ಟವರನ್ನು ಮುನಿರಾಜು 65, ಜ್ಯೋತಿ 14 ಸುಬ್ಬಲಕ್ಷ್ಮಿ 60 ಎಂದು ಗುರುತಿಸಲಾಗಿದೆ. ಸಿಗಂದೂರು ದೇವಾಲಯದಿಂದ ಶಿಡ್ಲಘಟ್ಟ ಕ್ಕೆ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 206 ನಲ್ಲಿರುವ ಶಿವಪುರ ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಆ ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.
ಮೃತರೆಲ್ಲಾ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದ ಮೂಲದವರಾಗಿದ್ದು, ಬೀರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.