
ಬೆಂಗಳೂರು(ಸೆ.13): ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ನಿನ್ನೆ ಮತ್ತೆ ಸುಪ್ರೀಂ ಕೋರ್ಟ್ ನಿಂದ ಕರ್ನಾಟಕ ರಾಜ್ಯಕ್ಕೆ ವ್ಯತಿರಿಕ್ತವಾಗಿ ಆದೇಶ ಬಂದ ಹಿನ್ನೆಲೆಯಲ್ಲಿ ಬೆಂಗಳೂರು ಹೊತ್ತಿ ಉರಿದಿದೆ.
ಈ ಹಿನ್ನೆಲೆಯಲ್ಲಿ ನಿನ್ನೆಯಿಂದಲೆ ಬೆಂಗಳೂರಿನಾದ್ಯಂತ 144 ಸೆಕ್ಷನ್ ಜಾರಿಗೊಳಿಸಿದ್ದು ಬೆಂಗಳೂರು ಹೊರವಲಯ ಎಲೆಕ್ಟ್ರಾನಿಕ್ ಸಿಟಿ, ಹೊಸೂರು ಮುಖ್ಯರಸ್ತೆ ಹಾಗು ಅತ್ತಿಬೆಲೆ ಗಡಿ ಭಾಗಗಳಲ್ಲಿ ಬಂದ್ ವಾತಾವರಣ ನಿರ್ಮಾಣವಾಗಿದೆ. ಮುಂಜಾಗೃತ ಕ್ರಮವಾಗಿ ಪೊಲೀಸರು ಎಲ್ಲೆಡೆ ಬಿಗಿ ಪೊಲೀಸ್ ಬಂದೊಬಸ್ತ್ ಕೈಗೊಳ್ಳಲಾಗಿದೆ.
ತಮಿಳರ ಹೋಟೆಲ್ ಗಳು ಹಾಗೂ ಕಂಪನಿಗಳಿಗೆ ಪೊಲೀಸ್ ಭದ್ರತೆಯನ್ನು ಕಲ್ಪಿಸಿದ್ದಾರೆ. ಇನ್ನು ಅತ್ತಿಬೆಲೆ ಗಡಿಯಿಂದ ತಮಿಳುನಾಡಿಗೆ ಹಾಗೂ ತಮಿಳುನಾಡಿನ ಹೊಸೂರು ಗಡಿಯಿಂದ ಬೆಂಗಳೂರು ಕಡೆಗೆ ಯಾವುದೆ ವಾಹನಗಳನ್ನು ಬಿಡದೆ ಇರುವುದರಿಂದ ಹೊಸೂರು ಮುಖ್ಯರಸ್ತೆ ವಾಹನಗಳ ಸಂಚಾರವಿಲ್ಲದೆ ಬಿಕೋ ಎನ್ನುತ್ತಿದೆ.
ಅತ್ತಿಬೆಲೆ ಗಡಿಭಾಗದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ಕಲ್ಪಿಸಲಾಗಿದ್ದು, ಯಾವುದೆ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.