
ಬೆಂಗಳೂರು (ಅ.18): ದುಷ್ಕರ್ಮಿಗಳಿಂದ ಕೊಲೆಗೀಡಾದ ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಅಂತ್ಯ ಸಂಸ್ಕಾರ ಇಂದು ನಡೆಯಲಿರುವ ಹಿನ್ನೆಲೆಯಲ್ಲಿ ನಗರದ ನಾಲ್ಕು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮುಂದುವರೆದಿದೆ.
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಪಾರ್ಥಿವ ಶರೀರವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.
ಶಿವಾಜಿನಗರದ ಮಿಲ್ಕ್ ಕಾಲೋನಿಯಲ್ಲಿರುವ ಮನೆಯಲ್ಲಿ ಪಾರ್ಥಿವ ಶರೀರ ಇಡಲಾಗಿದೆ. ಬೈಯ್ಯಪ್ಪನಹಳ್ಳಿ ಬಳಿಯ ಕಲ್ಪಳ್ಳಿ ಸ್ಮಶಾನದಲ್ಲಿ ಇಂದು ಸಂಜೆ 4:30ಕ್ಕೆ ರುದ್ರೇಶ್ ಅಂತ್ಯಕ್ರಿಯೆ ನಡೆಯಲಿದೆ.
ಶಿವಾಜಿನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ ಹಾಗೂ ಸೆ. 144 ಮುಂದುವರೆಸಲಾಗಿದೆ. ಎರಡು ಕೆ ಎಸ್ ಆರ್ ಪಿ ಸೇರಿ ಒಟ್ಡು ಇನ್ನೂರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.
ಕೇಂದ್ರ ಸಚಿವ ಅನಂತಕುಮಾರ್ ಮತ್ತು ಸಂಸದ ಪಿ.ಸಿ.ಮೋಹನ್ ಮಿಲ್ಕ್ ಕಾಲೋನಿ ನಿವಾಸಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.