
ಬೆಂಗಳೂರು: ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ನಿಧನದ ಹಿನ್ನೆಲೆಯಲ್ಲಿ ತಮಿಳು ಭಾಷಿಗರ ಬಾಹುಳ್ಯ ಹೆಚ್ಚಿರುವ ಪ್ರದೇಶದಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಕರುಣಾನಿಧಿ ಅವರ ನಿಧನದ ವಾರ್ತೆ ಹೊರಬರುತ್ತಿದ್ದಂತೆ ತಮಿಳು ಭಾಷಿಕರ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಹೆಚ್ಚಿಸಲಾಗಿದೆ.
ಕರ್ನಾಟಕ ಮತ್ತು ತಮಿಳುನಾಡಿನ ಗಡಿಪ್ರದೇಶ ವಾದ ಹೊಸೂರು ರಸ್ತೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳ ಲಾಗಿದೆ. ಶ್ರೀರಾಮಪುರ, ಹಲಸೂರು, ಇಂದಿರಾನಗರ, ವಿವೇಕನಗರ, ಚಂದಾಪುರ, ಭಾರತೀನಗರ, ಬೊ ಮ್ಮನಹಳ್ಳಿ, ಮಹಾಲಕ್ಷ್ಮೀಪುರ, ಮೈಸೂರು ರಸ್ತೆಯ ಆನಂದಪುರ, ಫ್ರೆಜರ್ ಟೌನ್ ಬಳಿಯ ಪೆರಿಯಾರ್ ನಗರ, ಟ್ಯಾನರಿ ರಸ್ತೆ, ಕೆ.ಆರ್ ಪುರ, ಗಾಂಧಿನಗರ ಸೇರಿದಂತೆ ತಮಿಳರು ನೆಲೆಸಿರುವ ನಗರದ ನಾನಾ ಭಾಗಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಮುಂಜಾಗೃತ ಕ್ರಮವಾಗಿ ರಾಜ್ಯ ಮೀಸಲು ಪಡೆ, ನಗರ ಸಶಸ್ತ್ರ ಮೀಸಲು ಪಡೆ ವಾಹನಗಳನ್ನು ಸೂಕ್ಷ್ಮ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ.
ಆಯಾ ಠಾಣಾ ವ್ಯಾಪ್ತಿಗಳಲ್ಲಿನ ಇನ್ಸ್‌ಪೆಕ್ಟರ್ ಹಾಗೂ ಎಸಿಪಿಗಳು ನಿರಂತರವಾಗಿ ಗಸ್ತು ತಿರುಗುತ್ತಿದ್ದಾರೆ. ತಮಿಳುಭಾಷಿಕರ ಮುಖಂಡರ ಜತೆ ಕೂಡ ಮಾತನಾಡಲಾಗಿದೆ. ಮುಂಜಾಗೃತ ಕ್ರಮವಾಗಿ ರಾಜ್ಯದ ಬಸ್‌ಗಳನ್ನು ನಿಲ್ಲಿಸಲಾಗಿದೆ. ಅತ್ತಿಬೆಲೆಯಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಸೀಮಂತ್‌ಕುಮಾರ್ ಸಿಂಗ್ ‘ಕನ್ನಡಪ್ರಭ’ಕ್ಕೆ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.