
ಬೆಂಗಳೂರು (ಜ.25): ವಿವಿಧ ಕನ್ನಡಪರ ಸಂಘಟನೆಗಳಿಂದ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಸಿಎಂ ಅಧಿಕೃತ ನಿವಾಸ ಕಾವೇರಿಗೆ ಹೆಚ್ಚು ಪೊಲೀಸರ ಭದ್ರತೆ ಒದಗಿಸಲಾಗಿದೆ. ಯಾರಿಗೂ ಒಳಗೆ ಬರದಂತೆ ಪೊಲೀಸರಿಗೆ ಸಿಎಂ ಸೂಚನೆ ನೀಡಿದ್ದಾರೆ.
ಸಿಎಂ ನಿವಾಸಕ್ಕೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ಎನ್ ರಾಜು ಭೇಟಿ ನೀಡಿದ್ದು ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಮಾಹಿತಿ ಸಿದ್ದರಾಮಯ್ಯ ಗೆ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಬಂದ್ ಹೇಗಿದೆ, ಭದ್ರತೆ ಎಲ್ಲೆಲ್ಲಿ ಕಲ್ಪಿಸಲಾಗಿದೆ ಎಂದು ಸಿಎಂ ಪ್ರಶ್ನಿಸಿದ್ದು, ರಾಜ್ಯದಲ್ಲಿ ಬಂದ್ ಶಾಂತಿಯುತವಾಗಿ ನಡೆಯುತ್ತಿದೆ. ಎಲ್ಲೂ ಕೂಡ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಸೂಕ್ಷ್ಮ ಪ್ರದೇಶದಲ್ಲಿ ಕಟ್ಟೆಚ್ವರ ವಹಿಸಲಾಗಿದೆ. ಮಹದಾಯಿ ಹೋರಾಟ ಕೇಂದ್ರ ಭಾಗ ಹಾಗೂ ಬೆಂಗಳೂರಲ್ಲೂ ಹೆಚ್ಚು ಭದ್ರತೆ ಒದಗಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇದು ಚುನಾವಣೆಯ ವರ್ಷ. ನಮ್ಮ ಸರ್ಕಾರಕ್ಕೆ ಕೆಲವರು ಕೆಟ್ಟ ಹೆಸರು ತರುವ ಕೆಲಸ ಮಾಡುತ್ತಿದ್ದಾರೆ. ಬಂದ್ ನೆಪದಲ್ಲಿ ಕೋಮು ಗಲಭೆ ಸೃಷ್ಟಿಸಿ ಕಾನೂನು ಸುವ್ಯವಸ್ಥೆ ಹಾಳು ಮಾಡುವ ಕೆಲಸ ಮಾಡುತ್ತಿದ್ದಾರೆ. ಬಂದ್ ಕರೆ ಕೊಡುವವರು ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಿ. ಸರ್ಕಾರಕ್ಕೆ ಕೆಟ್ಟ ಹೆಸರು ತರುವುದಕ್ಕೆ ಅವಕಾಶ ಮಾಡಕೊಡಬೇಡಿ. ಕಾನೂನು ಕೈಗೆತ್ತಿಕೊಂಡವರ ವಿರುದ್ದ ನಿರ್ದಾಕ್ಷ್ಯಿಣ್ಯವಾಗಿ ಕ್ರಮ ಕೈಗೊಳ್ಳಿ ಎಂದು ನೀಲಮಣಿ ಎನ್ ರಾಜುಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.