
ನವದೆಹಲಿ, (ಅ.08): ಚುನಾವಣೆಗಳಿಗೆ ದಿನಾಂಕ ನಿಗದಿಯಾಗುತ್ತಿದ್ದಂತೆಯೇ ಒಬ್ಬೊಬ್ಬರ ಸಮೀಕ್ಷೆಗಳ ಲೆಕ್ಕಾಚಾರಗಳು ಶುರುವಾಗುತ್ತವೆ. ಈಗ ಪಂಚರಾಜ್ಯಗಳ ವಿಧಾನಸಭೆ ಚುನಾವಣೆಗೆ ಮುಹೂರ್ತ ನಿಗದಿಯಾಗಿದ್ದು, ಪಂಚರಾಜ್ಯಗಳಲ್ಲಿ ಯಾರು ಗೆಲ್ಲುತ್ತಾರೆ? ಯಾರು ಸೋಲುತ್ತಾರೆ? ಎನ್ನುವುದನ್ನು ಟೈಮ್ಸ್ ನೌ ವಾರ್ ರೂಂ ಸ್ಟ್ರ್ಯಾಟಜಿಸ್ ಮತದಾನ ಪೂರ್ವ ಸಮೀಕ್ಷೆ ನಡೆಸಿದೆ.
ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಡ ರಾಜ್ಯದಲ್ಲಿ ಟೈಮ್ಸ್ ನೌ ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದ್ದು, ಯಾವ ಪಕ್ಷ ಎಷ್ಟೆಷ್ಟು ಸ್ಥಾನಗಳಲ್ಲಿ ಗೆಲ್ಲಲಿವೆ ಎನ್ನುವ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.
ಛತ್ತೀಸ್ಗಡದಲ್ಲಿ ಮತ್ತೆ BJP ಸರ್ಕಾರ: ಛತ್ತೀಸ್‌ಗಢ ವಿಧಾನಸಭೆ ಚುನಾವಣೆ ಕುರಿತು ಟೈಮ್ಸ್ ನೌ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯ ಪ್ರಕಾರ ಬಿಜೆಪಿ ಅತಿ ದೊಡ್ಡ ಪಕ್ಷವಾಗಲಿದ್ದು,ಒಟ್ಟು 90 ಸ್ಥಾನಗಳಲ್ಲಿ ಬಿಜೆಪಿ 47, ಕಾಂಗ್ರೆಸ್ 33, ಇತರರಿಗೆ 10 ಸ್ಥಾನಗಳು ಸಿಗಲಿವೆ. ಕಳೆದ ಬಾರಿ 49 ಗೆದ್ದಿದ್ದ ಬಿಜೆಪಿಗೆ ಈ ಬಾರಿ 47 ಸ್ಥಾನ ಸಾಧ್ಯತೆ ಇದ್ದು, ಮತ್ತೊಮ್ಮೆ ಆಡಳಿತಾರೂಢ ಬಿಜೆಪಿಗೆ ಮತದಾರ ಒಲಿಯಲಿದ್ದಾನೆ ಎಂದು ಟೈಮ್ಸ್ ನೌ ಸಮೀಕ್ಷೆ ಹೇಳಿದೆ.
ಮಧ್ಯಪ್ರದೇಶದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ: ಮಧ್ಯಪ್ರದೇಶದಲ್ಲೂ ಆಡಳಿತರೂಢ ಭಾರತೀಯ ಜನತಾ ಪಾರ್ಟಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆ ಹೇಳಿದೆ.ಒಟ್ಟು 230 ಸ್ಥಾಣಗಳ ಪೈಕಿ ಬಿಜೆಪಿ 142 ಸ್ಥಾನ. ಕಾಂಗ್ರೆಸ್ಸಿಗೆ 77 ಸ್ಥಾನ ಲಭಿಸಿದೆ. ಇನ್ನು ಇತರೆ ಪಕ್ಷಗಳು 11 ಸ್ಥಾನಗಳಲ್ಲಿ ಗೆಲ್ಲುವ ಸಾಧ್ಯತೆಗಳಿವೆ.
ರಾಜಸ್ಥಾನದಲ್ಲಿ ಆಡಳಿತರೂಢ BJPಗೆ ಸೋಲು:ಟೈಮ್ಸ್ ನೌ ಚುನಾವಣಾ ಪೂರ್ವ ಸಮೀಕ್ಷೆಯಂತೆ ರಾಜಸ್ಥಾನದಲ್ಲಿ ಮತದಾರ ಕಾಂಗ್ರೆಸ್ಗೆ ಒಲಿದಿದ್ದು, ಆಡಳಿತರೂಢ ಬಿಜೆಪಿಗೆ ಮುಖಭಂಗವಾಗಿದೆ. ಒಟ್ಟು 200 ಸ್ಥಾನಗಳಲ್ಲಿ ಬಿಜೆಪಿ 75, ಕಾಂಗ್ರೆಸ್ 115, ಇತರರು 10 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಟೈಮ್ಸ್ ನೌ ಚುನಾವಣಾ ಪೂರ್ವ ಸಮೀಕ್ಷೆಯಿಂದ ತಿಳಿದುಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.