
ಹೊಸಕೋಟೆ : ಟಿಪ್ಪರ್ ಒಂದು ಮನೆಗೆ ನುಗ್ಗಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾ ಘಟನೆ ಹೊಸಕೋಟೆ ತಾಲೂಕಿನ ಬೋಧನಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿ 207ರ ಚಿಕ್ಕತಿರುಪತಿ ಕಡೆಯಿಂದ ಬೆಂಗಳೂರಿಗೆ ಎಮ್ ಸ್ಯಾಂಡ್ ಡಸ್ಟ್ ತುಂಬಿದ್ದ ಟಿಪ್ಪರ್ ಲಾರಿ ಮನೆಗೆ ನುಗ್ಗಿದ ಪರಿಣಾಮ 26 ವರ್ಷದ ರಘು, 45 ವರ್ಷದ ಮಂಜುನಾಥ್ ಮೃತಪಟ್ಟಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ತಿರುವಿನಲ್ಲಿದ್ದ ಮನೆಗೆ ನುಗ್ಗಿದೆ. ಈ ವೇಳೆ ಮನೆಯ ಛಾವಣಿ ಸಂಪೂರ್ಣ ಕುಸಿತವಾಗಿದ್ದು, ಮನೆ ಕುಸಿದ ಪರಿಣಾಮ ಮನೆಯಲ್ಲಿ ಮಲಗಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅವಶೇಷಗಳ ಅಡಿ ಸಿಲುಕಿದ್ದ ಮೃತದೇಹಗಳನ್ನು ಕ್ರೇನ್ ಸಹಾಯದಿಂದ ತೆರವು ಕಾರ್ಯಾಚರಣೆ ಮಾಡಲಾಗಿದೆ. ಸ್ಥಳಕ್ಕೆ ತಿರುಮಲ ಶೆಟ್ಟಿಹಳ್ಳಿ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.