‘ಬ್ರಿಟಿಷರ ವಿರುದ್ಧ ಟಿಪ್ಪು ಹೋರಾಡಿದ್ದು ಸ್ವಾತಂತ್ರ್ಯಕ್ಕಲ್ಲ’

Published : Nov 06, 2017, 04:16 PM ISTUpdated : Apr 11, 2018, 12:49 PM IST
‘ಬ್ರಿಟಿಷರ ವಿರುದ್ಧ ಟಿಪ್ಪು ಹೋರಾಡಿದ್ದು ಸ್ವಾತಂತ್ರ್ಯಕ್ಕಲ್ಲ’

ಸಾರಾಂಶ

ಟಿಪ್ಪು ಸುಲ್ತಾನ್ ತನ್ನ ಸಾಮ್ರಾಜ್ಯ ಉಳಿವಿಗಾಗಿ ಫ್ರೆಂಚ್‌ರಿಂದ ಹಣ ಪಡೆದು ಬ್ರಿಟಿಷರ ವಿರುದ್ಧ ಹೋರಾಡಿ ದ್ದಾನೆಯೇ ಹೊರತು ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿಲ್ಲ ಎಂದು ಬಿಜೆಪಿ ಮುಖಂಡ, ರಾಜ್ಯ ಸಭಾ ಸದಸ್ಯ ಡಾ.ಸುಬ್ರಮಣಿಯನ್ ಸ್ವಾಮಿ ತಿಳಿಸಿದರು.

ಬೆಳಗಾವಿ: ಟಿಪ್ಪು ಸುಲ್ತಾನ್ ತನ್ನ ಸಾಮ್ರಾಜ್ಯ ಉಳಿವಿಗಾಗಿ ಫ್ರೆಂಚ್‌ರಿಂದ ಹಣ ಪಡೆದು ಬ್ರಿಟಿಷರ ವಿರುದ್ಧ ಹೋರಾಡಿ ದ್ದಾನೆಯೇ ಹೊರತು ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿಲ್ಲ ಎಂದು ಬಿಜೆಪಿ ಮುಖಂಡ, ರಾಜ್ಯ ಸಭಾ ಸದಸ್ಯ ಡಾ.ಸುಬ್ರಮಣಿಯನ್ ಸ್ವಾಮಿ ತಿಳಿಸಿದರು.

ಪ್ರಬುದ್ಧ ಭಾರತ ಸಂಘಟನೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಉಪನ್ಯಾಸದಲ್ಲಿ ಭಾರತದಲ್ಲಿ ಬೌದ್ಧಿಕ ಭಯೋತ್ಪಾದನೆ ಮತ್ತು ಬಲಪಂಥೀಯ ಧೋರಣೆ ವಿಷಯವಾಗಿ ಉಪನ್ಯಾಸ ನೀಡಿದರು.

ಟಿಪ್ಪು ಸುಲ್ತಾನ್ ಹಣಕ್ಕಾಗಿ ಸಮಯ ಸಾಧಕನಾಗಿ ಹೋರಾಟ ಮಾಡಿದ್ದಾನೆ. ಆತ ಸ್ವಾತಂತ್ರ್ಯ ಹೋರಾಟಗಾರ ಎಂಬುದು ಶುದ್ಧ ಸುಳ್ಳು ಎಂದರು.

ಹಿಂದೂ ಸಮುದಾಯದಲ್ಲಿ ಭಯೋತ್ಪಾದಕರಿದ್ದಾರೆ ಎಂಬ ಕಮಲ್‌ಹಾಸನ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕೆಲವೊಂದು ಸಿನಿಮಾಗಳಲ್ಲಿ ನಟಿಸಿ ಅವಕಾಶ ಸಿಗದಿದ್ದಾಗ ಹಿಂದೂ ಭಯೋತ್ಪಾದನೆ, ಹಿಂದೂ ಭಯೋತ್ಪಾದಕರು ಎಂದೆಲ್ಲ ಹೇಳಿಕೆ ನೀಡುತ್ತಿದ್ದಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌
ಖರ್ಗೆ ಪ್ರಧಾನಿ ಆಗಲಿಲ್ಲ, ನಾನು ಮಂತ್ರಿ ಆಗಲಿಲ್ಲ, ನೋವು ತೋಡಿಕೊಂಡ ಬಸವರಾಜ ರಾಯರೆಡ್ಡಿ