ಟಿಪ್ಪು ಜಯಂತಿ ರದ್ದು : ಸರ್ಕಾರಕ್ಕೆ ಸಂಕಷ್ಟ?

By Kannadaprabha NewsFirst Published Sep 18, 2019, 7:18 AM IST
Highlights

ಟಿಪ್ಪು ಜಯಂತಿ ಆಚರಣೆ ಮಾಡುವುದನ್ನು ರದ್ದುಪಡಿಸಿ ಸರ್ಕಾರ ಹೊರಡಿಸಿದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದ್ದು ಈ ಸಂಬಂಧ ಸರ್ಕಾರಕ್ಕೆ ನೋಟಿಸ್ ನೀಡಲಾಗಿದೆ. 

ಬೆಂಗಳೂರು [ಸೆ.18]: ಟಿಪ್ಪು ಜಯಂತಿ ಆಚರಣೆ ಮಾಡುವುದನ್ನು ರದ್ದುಪಡಿಸಿ ಸರ್ಕಾರ ಹೊರಡಿಸಿದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದ್ದು, ಮಂಗಳವಾರ ವಿಚಾರಣೆ ನಡೆಯಿತು.

ಉತ್ತರ ಪ್ರದೇಶದ ಲಕ್ನೋ ನಿವಾಸಿ ಬಿಲಾಲ್‌ ಆಲಿ ಶಾ, ಟಿಪ್ಪು ಸುಲ್ತಾನ್‌ ಯುನೈಟೆಡ್‌ ಫ್ರಂಟ್‌ ಮತ್ತು ಟಿಪ್ಪು ರಾಷ್ಟ್ರೀಯ ಸೇವಾ ಸಂಘದ ವತಿಯಿಂದ ಅರ್ಜಿ ಸಲ್ಲಿಸಲಾಗಿದೆ. ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕ ಮತ್ತು ನ್ಯಾಯಮೂರ್ತಿ ಮೊಹಮ್ಮದ್‌ ನವಾಜ್‌ ಅವರಿದ್ದ ವಿಭಾಗೀಯ ನ್ಯಾಯಪೀಠ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನೋಟಿಸ್‌ ಜಾರಿ ಮಾಡಿತು. ಅಲ್ಲದೆ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿ ವಿಚಾರಣೆಯನ್ನು ಅ.18ಕ್ಕೆ ಮುಂದೂಡಿತು.

ಪ್ರತಿವರ್ಷ ನವೆಂಬರ್‌ 10 ರಂದು ರಾಜ್ಯಾದ್ಯಂತ ಸರ್ಕಾರದಿಂದ ಟಿಪ್ಪು ಸುಲ್ತಾನ್‌ ಜಯಂತಿ ಆಚರಣೆ ಮಾಡಲು 2015ರಲ್ಲಿ ಅಂದಿನ ರಾಜ್ಯ ಕಾಂಗ್ರೆಸ್‌ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಆ ಅಧಿಸೂಚನೆಯನ್ನು ರಾಜ್ಯ ಬಿಜೆಪಿ ಸರ್ಕಾರವು 2019ರಂದು ಜುಲೈ 30ರಂದು ರದ್ದು ಮಾಡಿ ಆದೇಶಿಸಿತು. ಈ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್‌ ಸಲ್ಲಿಸಲಾಗಿದೆ.

click me!