3 ಶಾಸಕರು ಬಿಜೆಪಿಗೆ ಸೇರ್ಪಡೆ?

Published : May 28, 2019, 09:52 AM IST
3 ಶಾಸಕರು ಬಿಜೆಪಿಗೆ ಸೇರ್ಪಡೆ?

ಸಾರಾಂಶ

ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಒಂದರ ಮೇಲೆ ಒಂದು ಆಘಾತಗಳು ರಾಜಕೀಯ ಪಕ್ಷಗಳಿಗೆ ಆಗುತಿದ್ದು, ಮೂವರು ಬಿಜೆಪಿ ಸೇರುತ್ತಿದ್ದಾರೆ. 

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕೈಯಲ್ಲಿ ಭರ್ಜರಿ ಹೊಡೆತ ತಿಂದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತೊಂದು ಆಘಾತ ಎದುರಿಸಬೇಕಾಗಿ ಬಂದಿದೆ. 

ಪಕ್ಷದ ಇಬ್ಬರು ಶಾಸಕರಾದ ಶೀಲಭದ್ರ ದತ್ತಾ ಮತ್ತು ಸುನಿಲ್‌ ಸಿಂಗ್‌ ಸೋಮವಾರ ಸಂಜೆ ನವದೆಹಲಿಗೆ ಆಗಮಿಸಿದ್ದಾರೆ. ಅವರ ಜೊತೆಗೆ ಇತ್ತೀಚೆಗಷ್ಟೇ ಟಿಎಂಸಿಯಿಂದ ಅಮಾನತುಗೊಂಡ ಬಿಜೆಪಿ ನಾಯಕ ಮುಕುಲ್‌ ರಾಯ್‌ ಅವರ ಪುತ್ರ ಶಾಸಕ ಸುಭ್ರಾಂಶ್ಷು ರಾಯ್‌ ಕೂಡಾ ಇದ್ದಾರೆ. 

ಈ ಮೂವರೂ ಮಂಗಳವಾರ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ. ಟಿಎಂಸಿಯ 140ಕ್ಕೂ ಹೆಚ್ಚು ಬಂಡಾಯ ನಾಯಕರು ನನ್ನ ಸಂಪರ್ಕದಲ್ಲಿದ್ದಾರೆ ಎಂದು ಮುಕುಲ್‌ ರಾಯ್‌ ಹೇಳಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೈಸೂರು ಏಕತಾ ಮಹಲ್‌ ವಿವಾದ, ಕೋರ್ಟ್ ಮೆಟ್ಟಲೇರಿದ ರಾಜಮಾತೆ ಪ್ರಮೋದಾದೇವಿ!
ವಿಮಾನದ ಬಾಲಕ್ಕೆ ಪ್ಯಾರಾಚೂಟ್ ಸಿಲುಕಿ15,000 ಅಡಿ ಎತ್ತರದಲ್ಲಿ ನೇತಾಡಿದ ಸ್ಕೈಡೈವರ್ ಬದುಕುಳಿದಿದ್ದು ಹೇಗೆ? ವೀಡಿಯೋ