ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ ಪಳನೀಸ್ವಾಮಿ

Published : May 24, 2017, 05:55 PM ISTUpdated : Apr 11, 2018, 12:34 PM IST
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ ಪಳನೀಸ್ವಾಮಿ

ಸಾರಾಂಶ

ತಮಿಳುನಾಡು ಮುಖ್ಯಮಂತ್ರಿ ಕೆ.ಪಳನೀಸ್ವಾಮಿ ಪ್ರಧಾನಿ ನರೇಂದ್ರ ಮೋದಿಯನ್ನು ಅವರ ನಿವಾಸದಲ್ಲಿಂದು ಭೇಟಿ ಮಾಡಿ ರಾಜ್ಯದ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದರು. ಎಐಎಡಿಎಂಕೆ ಸಂಸ್ಥಾಪಕ ಎಂಜಿಆರ್ ಹುಟ್ಟುಹಬ್ಬ ಮತ್ತು ಜಯಲಲಿತಾ ಭಾವಚಿತ್ರ ಅನಾವರಣಕ್ಕೆ ಪ್ರಧಾನಿಯನ್ನು ಆಹ್ವಾನಿಸಿದರು.

ನವದೆಹಲಿ (ಮೇ.24): ತಮಿಳುನಾಡು ಮುಖ್ಯಮಂತ್ರಿ ಕೆ.ಪಳನೀಸ್ವಾಮಿ ಪ್ರಧಾನಿ ನರೇಂದ್ರ ಮೋದಿಯನ್ನು ಅವರ ನಿವಾಸದಲ್ಲಿಂದು ಭೇಟಿ ಮಾಡಿ ರಾಜ್ಯದ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದರು. ಎಐಎಡಿಎಂಕೆ ಸಂಸ್ಥಾಪಕ ಎಂಜಿಆರ್ ಹುಟ್ಟುಹಬ್ಬ ಮತ್ತು ಜಯಲಲಿತಾ ಭಾವಚಿತ್ರ ಅನಾವರಣಕ್ಕೆ ಪ್ರಧಾನಿಯನ್ನು ಆಹ್ವಾನಿಸಿದರು.

ಜುಲೈ 17 ರಂದು ಎರಡೂ ಕಾರ್ಯಕ್ರಮಗಳು ಜರುಗಲಿವೆ. ಇದರಲ್ಲಿ ಭಾಗವಹಿಸಲು ಸಮಯಾವಕಾಶ ಮಾಡಿಕೊಳ್ಳಿ ಎಂದು ಕೋರಿ ಪಳನೀಸ್ವಾಮಿ ಮೋದಿಯವರಿಗೆ ಮುಂಚಿತವಾಗಿ ಪತ್ರ ಬರೆದಿದ್ದಾರೆ.

ರಾಷ್ಟ್ರಪತಿ ಚುನಾವಣೆ ಜುಲೈನಲ್ಲಿರುವ ಹಿನ್ನೆಲೆಯಲ್ಲಿ ಪಳನೀಸ್ವಾಮಿ ಮೋದಿಯವರನ್ನು ಭೇಟಿ ಮಾಡಿದ್ದಾರೆ ಎನ್ನಲಾಗಿದೆ.  ನಾವು ರಾಜಕೀಯದ ಬಗ್ಗೆ ಚರ್ಚೆ ನಡೆಸಲಿಲ್ಲ. ರಾಜ್ಯಕ್ಕೆ ಸಂಬಂಧಪಟ್ಟ ಸಾಕಷ್ಟು ವಿಚಾರಗಳ ಬಗ್ಗೆ ನಾವು ಮೆಮೊರೆಂಡಮ್ ಸಲ್ಲಿಸಿದ್ದೇನೆ ಎಂದು ಪಳನೀಸ್ವಾಮಿ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ
ಕಿಡ್ನಾಪ್ ಮಾಡಿದವರ ಸ್ಮಾರ್ಟ್‌ವಾಚ್ ಬಳಸಿ ಬಚಾವ್ ಆದ ಹೊಟೆಲ್ ಮ್ಯಾನೇಜರ್, ಕೈಹಿಡಿದ SOS