
ಬೆಂಗಳೂರು(ಡಿ.31): ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡಿಸೆಂಬರ್ 31ರಂದು ರಾತ್ರಿ 2 ಗಂಟೆಯವರೆಗೂ ನಮ್ಮ ಮೆಟ್ರೋ ರೈಲು ಸಂಚರಿಸಲಿದೆ. ಮಹಾತ್ಮಾಗಾಂಧಿ ರಸ್ತೆ,
ಬ್ರಿಗೇಡ್ ರಸ್ತೆ, ರಿಚ್'ಮಂಡ್ ರಸ್ತೆ ಸೇರಿದಂತೆ ಈ ಭಾಗದ ಪ್ರಮುಖ ರಸ್ತೆಗಳಲ್ಲಿ ತಡ ರಾತ್ರಿಯವರೆಗೂ ಸಂಭ್ರಮಾಚರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮೆಟ್ರೋ ಸಂಚಾರವನ್ನು ತಡ ರಾತ್ರಿಯ ನಂತರವೂ ಸಂಚರಿಸಲು ವ್ಯವಸ್ಥೆ ಕಲ್ಪಿಸಲಾಗಿದೆ.
ಡಿ.31ರಂದು ರಾತ್ರಿ 11ರ ಬಳಿಕ ಟ್ರಿನಿಟಿ ವೃತ್ತ, ಎಂಜಿ ರಸ್ತೆ ಹಾಗೂ ಕಬ್ಬನ್ ಪಾರ್ಕ್ ನಿಲ್ದಾಣಗಳಿಂದ ಪ್ರಯಾಣ ಪ್ರಾರಂಭಿಸುವವರಿಗೆ ಸರಾಸರಿ 50 ರು.ಗಳನ್ನು ಬಿಎಂಆರ್'ಸಿಎಲ್ ನಿಗದಿ ಪಡಿಸಿದೆ. ಜನದಟ್ಟನೆ ನಿಯಂತ್ರಿಸುವ ಸಲುವಾಗಿ 50ರು.ಗಳನ್ನು ನಿಗದಿ ಪಡಿಸಲಾಗಿದೆ. ಆದರೆ, ಸ್ಮಾರ್ಟ್'ಕಾರ್ಡ್ ಹೊಂದಿರುವವರಿಗೆ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲ. ಸಾಮಾನ್ಯವಾಗಿ ಲಭ್ಯವಿರುವ ರಿಯಾಯಿತಿ ಮುಂದುವರಿಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.