
ಬೆಂಗಳೂರು : ಪ್ರಧಾನ ಮಂತ್ರಿಗಳ ಸ್ವಚ್ಛತಾ ಭಾರತ್ ಅಭಿಯಾನದಿಂದ ಪ್ರೇರಣೆಗೊಂಡಿರುವ ರಾಜ್ಯ ಪೊಲೀಸ್ ಇಲಾಖೆಯು ಈಗ ಶುಚಿತ್ವ ಕಾಪಾಡುವ ಸಲುವಾಗಿ ಸಶಸ್ತ್ರ ಮೀಸಲು ಪಡೆ(ಕೆಎಸ್‌ಆರ್‌ಪಿ) ವಾಹನಗಳಿಗೆ ಶೌಚಾಲಯ ವ್ಯವಸ್ಥೆ ಕಲ್ಪಿಸಿದೆ.
ಕೆಎಸ್‌ಆರ್‌ಪಿ ಎಡಿಜಿಪಿ ಭಾಸ್ಕರ್ ರಾವ್ ಅವರೇ ಈ ಯೋಜನೆಯ ರೂವಾರಿಯಾಗಿದ್ದು, ಸ್ವಚ್ಛತೆಗೆ ಆದ್ಯತೆ ನೀಡಿದ ವಾಹನಗಳಿಗೆ ಟಾಯ್ಲೆಟ್ ಅನ್ನು ಆಳವಡಿಸಿದ್ದಾರೆ. ಇದಕ್ಕಾಗಿ ಪ್ರತಿ ವಾಹನಕ್ಕೆ 2 ಲಕ್ಷ ವೆಚ್ಚವಾಗಿದ್ದು, ಕೆಎಸ್‌ಆರ್‌ಪಿ ತುಕಡಿಯ ವಾಹನಗಳಿಗೆ ವಿಶೇಷ ವಿನ್ಯಾಸಗೊಳಿಸಿ ಹಿಂಭಾಗದಲ್ಲಿ ಶೌಚಾಲಯ ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಚುನಾವಣೆ, ಗಣ್ಯರ ಭೇಟಿ, ಗಲಾಟೆ, ದೊಂಬಿ ಹೀಗೆ ಭದ್ರತಾ ಕೆಲಸಗಳಿಗೆ ನಿಯೋಜಿತರಾಗುವ ಕೆಎಸ್‌ಆರ್‌ಪಿ ಸಿಬ್ಬಂದಿ, ಕರ್ತವ್ಯ ನಿರ್ವಹಣೆ ಸ್ಥಳದಲ್ಲಿ ಶೌಚಾಲಯದ ಇಲ್ಲದೆ ತೊಂದರೆ ಎದುರಿಸುತ್ತಿದ್ದರು. ಈ ಶೌಚಾಲಯ ಸಮಸ್ಯೆಯನ್ನು ಗಂಭೀರವಾಗಿ ತೆಗೆದುಕೊಂಡ ಎಡಿಜಿಪಿ ಭಾಸ್ಕರ್ ರಾವ್ ಅವರು ಅಂತಿಮವಾಗಿ ಪರಿಹಾರ ಒದಗಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.