
ಕೈರೋ: ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆ ನಡೆಯುತ್ತಿದ್ದ ವೇಳೆ ಬಾಂಬ್ ಸ್ಫೋಟಿಸಿ ಹಲವರನ್ನು ಕೊಂದು, ಪ್ರಾಣ ಭೀತಿಯಿಂದ ಓಡಿ ಹೋಗುತ್ತಿದ್ದವರ ಮೇಲೆ ಗುಂಡು ಹಾರಿಸಿ ನರಮೇಧ ನಡೆಸಿದ್ದ ಭಯೋತ್ಪಾದಕರ ಮೇಲೆ ಈಜಿಪ್ಟ್ ವಾಯುಪಡೆ ಶನಿವಾರ ಪ್ರತಿದಾಳಿ ಆರಂಭಿಸಿದೆ.
ಉಗ್ರರ ಅಡಗುದಾಣಗಳ ಮೇಲೆ ದಾಳಿ ನಡೆಸಿ ಹಲವಾರು ಮಂದಿ ಭಯೋತ್ಪಾದಕರನ್ನು ಹತ್ಯೆ ಮಾಡಿದೆ.
ಅವರಿಗೆ ಸೇರಿದ ವಾಹನಗಳನ್ನೂ ನಾಶಪಡಿಸಿದೆ. ಈ ನಡುವೆ, ಈಜಿಪ್ಟ್ ಉತ್ತರ ಸಿನಾಯ್ ಪ್ರಾಂತ್ಯದಲ್ಲಿ ನಡೆದ ಈ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 235ರಿಂದ 305ಕ್ಕೆ ಏರಿಕೆಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.