
ಬೆಂಗಳೂರು (ಸೆ.05): ಬಹು ನಿರೀಕ್ಷಿತ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಅ. 6ರಂದು ಬೆಳಗ್ಗೆ 10.30ಕ್ಕೆ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ನಡೆಯಲಿದ್ದು, ಪಕ್ಷದ ಆಂತರಿಕ ಭಿನ್ನಾಭಿಪ್ರಾಯಕ್ಕೆ ಈ ಸಭೆ ತೆರೆ ಎಳೆಯಲಿದೆ ಎಂದೇ ಬಿಜೆಪಿ ವಲಯದಲ್ಲಿ ಚರ್ಚೆಯಾಗುತ್ತಿದೆ.
ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಅನಂತ್‌ಕುಮಾರ್, ಡಿ.ವಿ.ಸದಾನಂದಗೌಡ, ವಿಪಕ್ಷ ನಾಯಕರಾದ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಆರ್‌ಎಸ್‌ಎಸ್ ಮುಖಂಡರಾದ ಸಂತೋಷ್, ಅರುಣ್ ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅರವಿಂದ್ ಲಿಂಬಾವಳಿ, ಸಿ.ಟಿ.ರವಿ, ಮಾಜಿ ಅಧ್ಯಕ್ಷ ಪ್ರಹ್ಲಾದ್ ಜೋಶಿ, ಮಾಜಿ ಸಚಿವ ಸಿ.ಎಂ.ಉದಾಸಿ, ರಾಜ್ಯ ಉಸ್ತುವಾರಿ ಮುರಳೀಧರ್‌ರಾವ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಯಡಿಯೂರಪ್ಪ ನೇಮಕಗೊಂಡ ಬಳಿಕ ನಡೆಯುತ್ತಿರುವ ಎರಡನೇ ಕೋರ್ ಕಮಿಟಿ ಸಭೆ ಇದಾಗಿದ್ದು, ಇದೇ ಮೊದಲ ಬಾರಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮ್‌ಲಾಲ್ ಪಾಲ್ಗೊಳ್ಳಲಿದ್ದಾರೆ. ಪಕ್ಷದ ಪದಾಧಿಕಾರಿಗಳ ನೇಮಕದಿಂದ ಆರಂಭಗೊಂಡ ಯಡಿಯೂರಪ್ಪ ಮತ್ತು ಈಶ್ವರಪ್ಪ ನಡುವಿನ ಭಿನ್ನಮತದಿಂದ ಪಕ್ಷದ ಪ್ರಮುಖ ಮುಖಂಡರಲ್ಲೇ ಎರಡು ಗುಂಪುಗಳನ್ನಾಗಿಸಿದೆ. ಹೀಗಾಗಿ ನಾಳಿನ ಸಭೆಯಲ್ಲಿ ಇವರಿಬ್ಬರ ನಡುವಣ ಬಿಕ್ಕಟ್ಟು ಶಮನಗೊಳ್ಳಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.