ಲಿಂಗಾಯಿತ ಸ್ವತಂತ್ರ ಧರ್ಮ: ಮಠಾಧೀಶರ, ವಿದ್ವಾಂಸರ ಸಮ್ಮುಖದಲ್ಲಿ ನಾಳೆ ಮಹತ್ತರ ಸಭೆ

Published : Aug 09, 2017, 04:11 PM ISTUpdated : Apr 11, 2018, 01:06 PM IST
ಲಿಂಗಾಯಿತ ಸ್ವತಂತ್ರ ಧರ್ಮ: ಮಠಾಧೀಶರ, ವಿದ್ವಾಂಸರ ಸಮ್ಮುಖದಲ್ಲಿ ನಾಳೆ ಮಹತ್ತರ ಸಭೆ

ಸಾರಾಂಶ

ಲಿಂಗಾಯಿತ ಧರ್ಮವನ್ನು ಸ್ವತಂತ್ರ ಧರ್ಮವೆಂದು ಘೋಷಿಸುವ ಮತ್ತು ಅದಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸುವ ಕುರಿತು ನಾಳೆ ಮಠಾಧೀಶರು, ಜನಪ್ರತಿನಿಧಿಗಳು, ಸಾಹಿತಿಗಳು, ವಿದ್ವಾಂಸರ ಸಮ್ಮುಖದಲ್ಲಿ ಮಹತ್ವದ ಸಭೆ ನಡೆಯಲಿದೆ.

ಬೆಂಗಳೂರು (ಆ.09): ಲಿಂಗಾಯಿತ ಧರ್ಮವನ್ನು ಸ್ವತಂತ್ರ ಧರ್ಮವೆಂದು ಘೋಷಿಸುವ ಮತ್ತು ಅದಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸುವ ಕುರಿತು ನಾಳೆ ಮಠಾಧೀಶರು, ಜನಪ್ರತಿನಿಧಿಗಳು, ಸಾಹಿತಿಗಳು, ವಿದ್ವಾಂಸರ ಸಮ್ಮುಖದಲ್ಲಿ ಮಹತ್ವದ ಸಭೆ ನಡೆಯಲಿದೆ.

ಪ್ರಸ್ತುತ ದೇಶದಲ್ಲಿ ಆರು ಅಲ್ಪ ಸಂಖ್ಯಾತ ಧರ್ಮಗಳಿವೆ. ಏಳನೇಯ ಧರ್ಮವಾಗಿ ಲಿಂಗಾಯಿತ ಧರ್ಮ ಸೇರಬೇಕು  ಅನ್ನೋದೇ ನಮ್ಮ ಉದ್ದೇಶ ಎಂದು ಜಲ ಸಂಪನ್ಮೂಲ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.

ನಾಳೆ ನಡೆಯಲಿರುವ ಮಹತ್ವದ ಸಭೆಯಲ್ಲಿ ಮಠಾಧೀಶರು, ಜನಪ್ರತಿನಿಧಿಗಳು, ಸಾಹಿತಿಗಳು, ವಿದ್ವಾಂಸರು ಭಾಗವಹಿಸಲಿದ್ದಾರೆ. ಅಲ್ಲಿ ಲಿಂಗಾಯಿತ ಧರ್ಮದ ಬಗ್ಗೆ  ಚರ್ಚೆ ನಡೆಸಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಿದ್ದಾರೆ.  ಹಿಂದೂ ಧರ್ಮಕ್ಕೂ, ಲಿಂಗಾಯಿತ ಧರ್ಮಕ್ಕೂ ಒಂದಕ್ಕೊಂದು ಸಂಬಂಧವಿಲ್ಲ. ಶಿವ ಹಾಗೂ ಭಕ್ತಿ ವಿಚಾರದಲ್ಲಿ ಸಾಮ್ಯತೆ ಇದೆ ಅನ್ನೋದನ್ನ ಬಿಟ್ಟರೆ ಬೇರೆ ಯಾವುದರಲ್ಲೂ ಸಾಮ್ಯತೆ ಇಲ್ಲ. ವೀರಶೈವ ಎಂಬುದು ಲಿಂಗಾಯಿತ ಧರ್ಮದ ಒಳಪಂಗಡ.  ಈ ಕುರಿತು ವಿದ್ವಾಂಸರು ಸಾಕಷ್ಟು ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ. ನಾಳೆ ಇದು ಚರ್ಚೆಯಾಗಲಿದೆ ಎಂದು ಎಂ.ಬಿ ಪಾಟೀಲ್ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟಿವಿ ನೋಡ್ತಿದ್ದ ಬಾಲಕಿಗೆ ಅಪ್ಪನ ಆಗಮನದ ಬಗ್ಗೆ ಸೂಚನೆ ನೀಡಿದ ಜರ್ಮನ್ ಶೆಫರ್ಡ್‌ ಶ್ವಾನ: ವೀಡಿಯೋ ಭಾರಿ ವೈರಲ್
ಭಾರತ ಮಾತ್ರವಲ್ಲ ಮೆಕ್ಸಿಕೋದಲ್ಲೂ ಅದೇ ಕತೆ, ಸದನದಲ್ಲೇ ಜುಟ್ಟು ಹಿಡಿ ಎಳೆದಾಡಿದ ನಾಯಕಿಯರು